ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ ಪೊಲೀಸ್‌ ಹಿರಿಯ ಅಧಿಕಾರಿಗಳು ಇನ್ನೂ ಇದನ್ನು ದೃಢಪಡಿಸಿಲ್ಲ. ಭಟ್ಕಳ ತಾಲೂಕಿನ ಹಾಡವಳ್ಳಿ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಇತ್ತೀಚಿಗೆ ಒಂದೇ ಮನೆಯ ನಾಲ್ವರನ್ನ ಕೊಚ್ಚಿ ಕೊಲೆ ಮಾಡಲಾಗಿತ್ತು. ಶಂಭು ಭಟ್ (70), ಮಾದೇವಿ ಭಟ್ (60), ರಾಘವೇಂದ್ರ ಭಟ್ (34), ಕುಸುಮಾ ಭಟ್ (30) ಅವರು ಕೊಲೆಯಾಗಿದ್ದರು. ಜಮೀನಿನ ವಿಷಯವಾಗಿ ಕೊಲೆ ನಡೆದಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಸಂಶಯಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪ್ರಕರಣದ ಪ್ರಮುಖ ಆರೋಪಿಗಳೆಂದು ಸಂಶಯಿಸಿರುವ ವಿನಯ್ ಭಟ್, ಶ್ರೀಧರ್ ಭಟ್ ತಲೆಮರೆಸಿಕೊಂಡಿದ್ದರು. ಇವರ ಪತ್ತೆಗಾಗಿ ಪೊಲೀಸರ ಮೂರು ತಂಡಗಳನ್ನು ರಚನೆ ಮಾಡಲಾಗಿತ್ತು. ಇವರಿಬ್ಬರ ಹುಡುಕಾಟದಲ್ಲಿದ್ದ ಪೊಲೀಸರಿಗೆ ಶಿವಮೊಗ್ಗದಲ್ಲಿ ಈ ಇಬ್ಬರು ಸಿಕ್ಕಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಹಿರಿಯ ಪೊಲೀಸ್‌ ಅಧಿಕಾರಿಗಳು ಅಧಿಕೃತವಾಗಿ ತಿಳಿಸಿಲ್ಲ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

4.3 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement