ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಯಡಿಯೂರಪ್ಪಗೆ ಜನ್ಮದಿನದ ಶುಭಾಷಯ ಕೋರಿದ ಪ್ರಧಾನಿ ಮೋದಿ

ಶಿವಮೊಗ್ಗ: ಕೆಲವೇ ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಐದನೇ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಇಂದು, ಸೋಮವಾರ ಲೋಕಾರ್ಪಣೆ ಮಾಡಿದ್ದಾರೆ.
ಅಲ್ಲದೆ, ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 80ನೇ ಜನ್ಮದಿನವೂ ಆಗಿದ್ದು, ಮೋಧಿ ಶುಭ ಹಾರೈಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಡಿಯೂರಪ್ಪ ಅವರ ಶ್ರಮ ಸಾಕಷ್ಟಿರುವುದರಿಂದ ಅವರ 80ನೇ ಜನ್ಮ ದಿನದಂದು ಪ್ರಧಾನಿ ನರೇಂದ್ರ ಮೋದಿ ಈ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದಾರೆ.
ನಂತರ ನಡೆದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ವೇದಿಕೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಅವರ ಕೈ ಹಿಡಿದು ಶಿರಭಾಗಿ ನಮಿಸಿದರು.
ವಿಮಾನ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಸಂಪ್ರದಾಯ ಮತ್ತು ತಂತ್ರಜ್ಞಾನದ ಸಂಯೋಜನೆಯನ್ನು ನೋಡಬಹುದು. ಇದು ಕೇವಲ ವಿಮಾನ ನಿಲ್ದಾಣವಲ್ಲ. ಈ ಭಾಗದ ಯುವಕರ ಕನಸುಗಳ ಹೊಸ ಪಯಣಕ್ಕೆ ಚಾಲನೆಯಾಗಿದೆ ಎಂದು ಹೇಳಿದರು.
ಯಶಸ್ಸಿನ ಉತ್ತುಂಗಕ್ಕೇರಿದ ಮೇಲೂ ನಡತೆಯಲ್ಲಿ ಹೇಗೆ ವಿನಯ ಇರಬೇಕು ಎಂಬುದಕ್ಕೆ ಯಡಿಯೂರಪ್ಪ ಅವರ ಮಾತುಗಳು ಮತ್ತು ಅವರ ಜೀವನ ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಮೋದಿ ಈ ವೇಳೆ ಯಡಿಯೂರಪ್ಪ ಅವರನ್ನು ಶ್ಲಾಘಿಸಿದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಯಡಿಯೂರಪ್ಪ ಬಡ-ರೈತರ ಕಲ್ಯಾಣಕ್ಕಾಗಿ ಜೀವನ ಮುಡಿಪಾಗಿಟ್ಟರು
ಇಂದು ಕರ್ನಾಟಕದ ಜನಪ್ರಿಯ ನಾಯಕ ಯಡಿಯೂರಪ್ಪನವರ ಜನ್ಮದಿನ. ಅವರ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಅವರು ತಮ್ಮ ಜೀವನವನ್ನು ಬಡ ಮತ್ತು ರೈತರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟರು. ಕಳೆದ ವಾರ ಕರ್ನಾಟಕದ ವಿಧಾನಸಭೆಯಲ್ಲಿ ಅವರು ಮಾಡಿದ ಭಾಷಣವು ಸಾರ್ವಜನಿಕ ಜೀವನವನ್ನು ನಡೆಸುವ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುವಂತಹದ್ದಾಗಿದೆ ಎಂದು ಹೇಳಿದರು.
ಈ ಹಿಂದೆ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆದಾಗ ಅದು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಬಿಜೆಪಿ ಸರ್ಕಾರ ಇದನ್ನು ಕರ್ನಾಟಕದ ಹಳ್ಳಿಗಳಿಗೆ ಮತ್ತು ಶ್ರೇಣಿ 2, ಶ್ರೇಣಿ 3 ನಗರಗಳಿಗೆ ವಿಸ್ತರಿಸಲು ಪ್ರಯತ್ನಿಸುತ್ತಿದೆ. ಇದರ ಫಲಿತಾಂಶವೇ ಶಿವಮೊಗ್ಗ ನಗರದಲ್ಲಿ ವಿಮಾನ ನಿಲ್ದಾN ನಿರ್ಮಾಣ ಎಂದು ಹೇಳಿದರು.

2014ಕ್ಕೂ ಮುನ್ನ ಏರ್ ಇಂಡಿಯಾ ಕುರಿತು ಚರ್ಚೆ ನಡೆದಾಗ ಅದು ನಕಾರಾತ್ಮಕ ಸುದ್ದಿಗಾಗಿಯೇ ಚರ್ಚೆಯಾಗಿತ್ತು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಏರ್ ಇಂಡಿಯಾವು ಹಗರಣಗಳಿಗೆ ಹೆಸರುವಾಸಿಯಾಗಿತ್ತು. ಇಂದು ಏರ್ ಇಂಡಿಯಾ ಭಾರತದ ಹೊಸ ಸಾಮರ್ಥ್ಯದ ರೂಪದಲ್ಲಿ ಪ್ರಪಂಚದ ಮುಂದೆ ಹೊಸ ವಿಮಾನಯಾನ ಸಂಸ್ಥೆಯಾಗಿ ತೆರೆದುಕೊಳ್ಳುತ್ತಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement