ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯದಲ್ಲಿ ಇಂದಿನಿಂದ ಟೋಲ್ ಸಂಗ್ರಹ

ಬೆಂಗಳೂರು: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಇಂದಿನಿಂದ (ಫೆಬ್ರವರಿ 27ರಿಂದ) ಆರಂಭವಾಗಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್​ ಸಂಗ್ರಹ ಆರಂಭವಾಗಿದೆ. ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಹತ್ತುಪಥಗಳ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಅದಕ್ಕೂ ಮುನ್ನವೇ ಪ್ರಯಾಣಿಕರು ಟೋಲ್ ಕಟ್ಟಬೇಕಿದೆ.
117 ಕಿ.ಮೀ ಉದ್ದದ ಹೆದ್ದಾರಿಯ ಬೆಂಗಳೂರು–ನಿಡಘಟ್ಟವರೆಗಿನ 56 ಕಿ.ಮೀ. ಉದ್ದದ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಈ ತಿಂಗಳಾಂತ್ಯದಿಂದಲೇ ಟೋಲ್ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಬೆಂಗಳೂರು ಬಳಿಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿ ಹಳ್ಳಿ ಬಳಿ ಟೋಲ್​ ಸಂಗ್ರಹಿಸಲಾಗುತ್ತಿದೆ.

ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಗ್ರಾಮದ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವವರು ಟೋಲ್‌ ಶುಲ್ಕ ಕಟ್ಟಿ ಪ್ರಯಾಣಿಸಬೇಕು. ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಬಳಿ ಇರುವ ಟೋಲ್‌ನಲ್ಲಿ ಮೈಸೂರು ಕಡೆಯಿಂದ ಪ್ರಯಾಣಿಸುವವರು ಟೋಲ್‌ ಕಟ್ಟಿ ಬೆಂಗಳೂರಿನತ್ತ ಬರಬಹುದು. ಈ ಕೇಂದ್ರಗಳು ತಲಾ 11 ಗೇಟುಗಳನ್ನು ಒಳಗೊಂಡಿದ್ದು, ಫ್ಯಾಶ್‌ ಟ್ಯಾಗ್‌ ಸಹಿತ ವಿವಿಧ ಸೌಲಭ್ಯಗಳನ್ನು ಒಳಗೊಳ್ಳಲಿವೆ.ಆರು ಪಥಗಳ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸುವವರಿಗೆ ಈ ಟೋಲ್‌ ಅನ್ವಯ ಆಗಲಿದೆ. ತಲಾ ಎರಡು ಪಥಗಳ ಸರ್ವೀಸ್ ರಸ್ತೆಯಲ್ಲಿನ ಸಂಚಾರಕ್ಕೆ ಯಾವುದೇ ಟೋಲ್‌ ಇಲ್ಲ. ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದ್ದು, ನಿಯಮಿತವಾಗಿ ಪ್ರಯಾಣಿಸುವವರಿಗೆ ತಿಂಗಳ ಪಾಸ್ ಸೌಲಭ್ಯ ಇದೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement