ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಆಘಾತ..: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ತನ್ವೀರ್ ಸೇಠ್: ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಮೈಸೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ನೀಡಿ ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರಿಗೆ ತನ್ವೀರ್ ಸೇಠ್ ಪತ್ರ ಬರೆದು ತಮ್ಮ ತೀರ್ಮಾನ ತಿಳಿಸಿದ್ದಾರೆ.
ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರದ ಬಗ್ಗೆ ಎಐಸಿಸಿ(AICC) ಪ್ರಧಾನ ಕಾರ್ಯದರ್ಶಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಅವರಿಗೂ ಪತ್ರ ಬರೆದಿದ್ದಾರೆ. ನನಗೆ ಆರೋಗ್ಯ ಸರಿ ಇರುವುದಿಲ್ಲ. ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗುತ್ತಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಅನಾರೋಗ್ಯ ಕಾರಣದಿಂದ ನಾನು ಚುನಾವಣೆಗೆ ಸ್ಪರ್ಧಿಸಬಾರದು ಎಂದು ನಿರ್ಧರಿಸಿದ್ದೇನೆ. ಈ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೂ ಪತ್ರ ಬರೆದಿದ್ದರು ಅನಾರೋಗ್ಯದಿಂದಾಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿರುವುದಾಗಿ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಹೇಳಿದ್ದರು. ಈವರೆಗೆ ಗೌಪ್ಯತೆ ಕಾಪಾಡಿಕೊಂಡಿದ್ದೆ ಎಂದು ಹೇಳಿದ್ದಾರೆ.
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ನಿರ್ಧಾರದ ವಿಚಾರ ತಿಳಿದ ಬಳಿಕ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ನಿವಾಸ ಮುಂದೆ ಜಮಾಯಿಸಿ ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸುತ್ತಿದ್ದಾರೆ. ಮುಂದೆಯೂ ನೀವೇ ಎಂಎಲ್‌ಎ, ಸ್ಪರ್ಧಿಸಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ತನ್ವೀರ್ ಕಾಲಿಗೆ ಬಿದ್ದು ನಿರ್ಧಾರ ಬದಲಾಯಿಸುವಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಈ ವೇಳೆ ಬೆಂಬಲಿಗನೋರ್ವ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಕೂಡಲೇ ಉದಯಗಿರಿ ಠಾಣಾ ಪೊಲೀಸರು ಬಾಟಲಿಯನ್ನು ಕಿತ್ತೆಸೆದಿದ್ದಾರೆ. ಮತ್ತೊಬ್ಬರು ಮನೆ ಛಾವಣಿ ಹತ್ತಿ ಧುಮುಕಲು ಯತ್ನಿಸದರು. ಅವರನ್ನು ತಡೆಯಲಾಯಿತು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement