ದೆಹಲಿ ಮದ್ಯ ಹಗರಣ: ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇಂದು, ಮಂಗಳವಾರ ಮಧ್ಯಾಹ್ನ 3:50ಕ್ಕೆ ವಿಚಾರಣೆ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಒಪ್ಪಿಗೆ ನೀಡಿದ್ದಾರೆ.
ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಸೋಡಿಯಾ ಅವರ ಬಂಧನ ಮತ್ತು ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ವಿಧಾನವನ್ನು ಪ್ರಶ್ನಿಸಿ ಸಿಜೆಐ ಮುಂದೆ ಅವರ ಪ್ರಕರಣವನ್ನು ಪ್ರಸ್ತಾಪಿಸಿದರು.
ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಅವರನ್ನು 5 ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.

ಎಎಪಿ ನಾಯಕನನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) 120 ಬಿ (ಕ್ರಿಮಿನಲ್ ಪಿತೂರಿ), 477 ಎ (ವಂಚನೆ ಮಾಡುವ ಉದ್ದೇಶ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ಬಂಧಿಸಲಾಗಿದೆ.
ದೆಹಲಿಯ ಹೊಸ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಆಪಾದಿತ ಅಕ್ರಮಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಭಾನುವಾರ ಅವರನ್ನು ಕರೆಸಿತ್ತು. ಎಂಟು ಗಂಟೆಗಳ ವಿಚಾರಣೆಯ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಬಂಧಿಸಲಾಯಿತು.ಅವರ ಉತ್ತರಗಳು ತೃಪ್ತಿಕರವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement