ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು.
ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯತ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್​ ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕರ್ನಾಟಕ ಸಚಿವಾಲಯ ನೌಕರರ ಸಂಘ, ಅರಣ್ಯ ಇಲಾಖೆಯ ನೌಕರರು, ವಿವಿಧ ನಿಗಮ ಮಂಡಳಿಗಳ ನೌಕರರೂ ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ. ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿನ ವಾಹನಗಳ ನೋಂದಣಿ, ಪರವಾನಗಿ ವಿತರಣೆ ಕಾರ್ಯಗಳೂಸ್ಥಗಿತಗೊಳ್ಳಲಿವೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಆಸ್ಪತ್ರೆಗಳಿಗೂ ಮುಷ್ಕರದ ಬಿಸಿ ತಟ್ಟಲಿದೆ. ಒಪಿಡಿ ಬಂದ್ ಮಾಡಲು ಆರೋಗ್ಯ ಇಲಾಖೆ ನೌಕರರು ತೀರ್ಮಾನಿಸಿದ್ದು, ತುರ್ತು ಸೇವೆ ಮಾತ್ರ ಲಭ್ಯವಿರಲಿದೆ.
ಗ್ರಾಮ ಪಂಚಾಯತ ಸಿಬ್ಬಂದಿ, ನಗರ ಸ್ಥಳೀಯ ಸಂಸ್ಥೆಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯಂ ಪೌರ ಕಾರ್ಮಿಕರೂ ಮುಷ್ಕರಕ್ಕೆ ಬೆಂಬಲ ನೀಡಿರುವುದರಿಂದ ನಗರ, ಗ್ರಾಮಗಳಲ್ಲಿ ಕಸ ಸಂಗ್ರಹಣೆ, ನೀರು ಪೂರೈಕೆಯಲ್ಲಿ ವ್ಯತ್ಯವಾಗಬಹುದಾಗಿದೆ.
ಪ್ರಾಥಮಿಕ ಶಾಲೆಗಳಿಂದ ಪದವಿ ಕಾಲೇಜುಗಳವರೆಗೂ ತರಗತಿಗಳು ನಡೆಯುವ ಸಾಧ್ಯತೆ ಕಡಿಮೆ. ಮಾರ್ಚ್‌ 1ರ ಬಳಿಕ ನಡೆಯಬೇಕಿದ್ದ ಶಾಲಾ, ಕಾಲೇಜು ಹಂತದ ಎಲ್ಲ ಪರೀಕ್ಷೆಗಳನ್ನೂ ಮುಂದೂಡಬಹುದು.
ಜಿಲ್ಲಾಧಿಕಾರಿ ಕಚೇರಿ, ಜಿಪಂ ಹಾಗೂ ತಹಶೀಲ್ದಾರ್ ಕಚೇರಿ ಸೇವೆಗಳಲ್ಲೂ ವ್ಯತ್ಯಯವಾಗಲಿದೆ. ಕಂದಾಯ ಇಲಾಖೆಯ ಬಹುತೇಕ ಸೇವೆಗಳು ಸ್ಥಗಿತಗೊಳ್ಳಬಹುದಾಗಿದೆ.

ಬಂದ್ ಆಗಬಹುದಾದ ಸರ್ಕಾರಿ ಕಚೇರಿಗಳು

ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್​ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು  ಬಂದ್​ ಇರಲಿವೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

7ನೇ ವೇತನ ಆಯೋಗ ಜಾರಿಗೆ ಕ್ರಮ‌
ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿ ಬಗ್ಗೆ ಕ್ರಮ‌ ಕೈಗೊಳ್ಳಲಾಗಿದೆ. ಸರ್ಕಾರಿ ನೌಕರರ ಯುನಿಯನ್ ಜೊತೆಗೆ ಸರ್ಕಾರದ ಅಧಿಕಾರಿಗಳು ಮಾತನಾಡುತ್ತಿದ್ದಾರೆ. ವೇತನ ಹೆಚ್ಚಳಕ್ಕೆ ಬಜೆಟ್ ಅನುದಾನ ಮೀಸಲಿಟ್ಟದ್ದೇವೆ. ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದೇನೆ. ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ. ಮಧ್ಯಂತರ ವರದಿ ಬಂದ ಕೂಡಲೇ ಜಾರಿಗೊಳಿಸಿ 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement