ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (H.D. Deve gowda) ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಮಂಗಳವಾರ ಬೆಳಿಗ್ಗೆ 10:30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವು ಹಾಗೂ ಊತಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ದೇವೇಗೌಡರು ಇಂದು,ಮಂಗಳವಾರಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್​ಗೆ ದೇವೇಗೌಡರು ಆಸ್ಪತ್ರೆಗೆ ಆಗಮಿಸಿದ್ದರು. ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಹೀಗಾಗಿ ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಇಂದು, ಮಂಗಳವಾರ ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ. ಕುಮಾರಸ್ವಾಮಿ ಅವರು, ದೇವೇಗೌಡರು ಆರೋಗ್ಯ ತಪಾಸಣೆಗೆ ಹೋಗಿದ್ದಾರೆ. ಅವರು ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಟಿಕೆಟ್​ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಅವರ ಸಲಹೆ ಪಡೆದು, ಕಾರ್ಯಕರ್ತರ ಭಾವನೆಗಳಿಗೆ ತಕ್ಕಂತೆ ಅವರೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement