ರಾಜ್ಯ ಸರ್ಕಾರದ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟ : ಮೂವರಿಗೆ ಪ್ರಶಸ್ತಿ ಘೋಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದೆ.
ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಎರಡು ವರ್ಷದ ಪ್ರಶಸ್ತಿ ಘೋಷಿಸಿರಲಿಲ್ಲ. ಈಗ ಈ ವರ್ಷದ ಪ್ರಶಸ್ತಿಯೂ ಸೇರಿದಂತೆ ಏಕಕಾಲಕ್ಕೆ ಮೂರು ವರ್ಷದ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೋಮವಾರ ರಾತ್ರಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇಂದು, ಮಂಗಳವಾರ ಕದಂಬೋತ್ಸವ ಉದ್ಘಾಟನೆಯಾಗುತ್ತಿದೆ…!
2020-21ನೇ ಸಾಲಿಗೆ ಹಿರಿಯ ಸಾಹಿತಿ-ಸಾಹಿತ್ಯ ಸಂಶೋಧಕ ಮೈಸೂರಿನ ಪ್ರೊ.ಸಿ.ಪಿ.ಕೃಷ್ಣಕುಮಾರ ಅವರನ್ನು ಆಯ್ಕೆ ಮಾಡಲಾಗಿದೆ. 2021-22ನೇ ಸಾಲಿಗೆ ಬರಹಗಾರ ಡಾ.ಬಾಬು ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿಗೆ ಸಾಹಿತಿ ಹಾಗೂ ಪತ್ರಕರ್ತ ಡಾ.ಎಸ್.ಆರ್. ರಾಮಸ್ವಾಮಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೂರು ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಸರ್ಕಾರ ಕೊಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಪ್ರಶಸ್ತಿಯನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಶೀಲಿಸಿ ಪ್ರಕಟಿಸುತ್ತಿದೆ.

ಬನವಾಸಿಯಲ್ಲಿ ಫೆಬ್ರುವರಿ 28 ಹಾಗೂ ಮಾರ್ಚ್ 1ರಂದು ನಿಗದಿಯಾದ ರಾಜ್ಯಮಟ್ಟದ ಕದಂಬೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ. ಆದರೆ ತೀರಾ ವಿಳಂಬವಾಗಿ ಕದಂಬೋತ್ಸವದ ಹಿಂದಿನ ದಿನ ಪಂಪ ಪ್ರಶಸ್ತಿಗೆ ಆಯ್ಕೆ ಮಾಡುತ್ತಿರುವುದು ಅಸಮಾಧಾನ ಆಕ್ಷೇಪಕ್ಕೆ ಕಾರಣವಾಗುತ್ತಿದೆ.
ಕುವೆಂಪು, ಶಿವರಾಮ ಕಾರಂತ, ಪುತಿನ, ಕೆ.ಎಸ್.ನರಸಿಂಹಸ್ವಾಮಿ, ಪೂರ್ಣಚಂದ್ರ ತೇಜಸ್ವಿ, ಎಸ್.ಎಲ್‌.ಭೈರಪ್ಪ, ನಿಸಾರ್ ಅಹ್ಮದ್, ಯಶವಂತ ಚಿತ್ತಾಲ ಸೇರಿದಂತೆ 33 ಸಾಹಿತಿಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement