ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ : ಅಂಗೀಕರಿಸಿದ ಸಿಎಂ ಕೇಜ್ರಿವಾಲ್

ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕರಾದ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವರಾದ ಸತ್ಯೇಂದ್ರ ಜೈನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.
ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಿದರೆ, ಸಿಸೋಡಿಯಾ ಮತ್ತು ಜೈನ್ ತಮ್ಮ ಸ್ಥಾನಗಳನ್ನು ಕಳೆದುಕೊಳ್ಳಬಹುದು ಮತ್ತು ಆರು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ.
ರಾಷ್ಟ್ರ ರಾಜಧಾನಿಯಲ್ಲಿ 2021-22 ಕ್ಕೆ ಈಗ ರದ್ದಾದ ಮದ್ಯ ನೀತಿಯ ಹಗರಣ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯವು ಕಳೆದ ವರ್ಷ ಮೇ ತಿಂಗಳಲ್ಲಿ ಬಂಧಿಸಿತ್ತು.
ಸಿಸೋಡಿಯಾ ಅವರು ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ಶಿಕ್ಷಣ ಸೇರಿದಂತೆ ಹಲವು ಉನ್ನತ ಖಾತೆಗಳನ್ನು ಹೊಂದಿದ್ದರು. ಏತನ್ಮಧ್ಯೆ, ಜೈನ್ ದೆಹಲಿಯ ಆರೋಗ್ಯ ಮತ್ತು ಕಾರಾಗೃಹಗಳ ಸಚಿವರಾಗಿದ್ದರು.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ಇಂದು ಸೋಮವಾರ ಮುಂಜಾನೆ, ಈಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿರುವುದನ್ನು ಪ್ರಶ್ನಿಸಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಸಿಸೋಡಿಯಾ ಅವರಿಗೆ ಹೈಕೋರ್ಟ್‌ನಲ್ಲಿ ಪರ್ಯಾಯ ಪರಿಹಾರಗಳಿವೆ. ನೇರವಾಗಿ ಇಲ್ಲಿಗೆ ಬರುವುದರ ಬದಲು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
ನೀವು ಎಫ್‌ಐಆರ್‌ ಅನ್ನು ಸವಾಲು ಮಾಡುತ್ತಿದ್ದೀರಿ, ರಿಮಾಂಡ್‌ಗೆ ಸವಾಲು ಹಾಕುತ್ತಿದ್ದೀರಿ, ಜಾಮೀನು ಕೋರುತ್ತಿದ್ದೀರಿ, ಎಲ್ಲವೂ ಆರ್ಟಿಕಲ್ 32 ರ ಅಡಿಯಲ್ಲಿ. ಸೆಕ್ಷನ್ 482 CrPC ಅಡಿಯಲ್ಲಿ ನೀವು ಹೈಕೋರ್ಟ್‌ನಲ್ಲಿ ಇದಕ್ಕೆ ಪರಿಹಾರಗಳನ್ನು ಹೊಂದಿದ್ದೀರಿ” ಎಂದು ಸಿಜೆಐ ಚಂದ್ರಚೂಡ ಅವರು ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರಿಗೆ ಆರಂಭದಲ್ಲಿ ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement