ಆಪ್‌ ತೊರೆದು ಬಿಜೆಪಿ ಸೇರಿದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ ರಾವ್‌

posted in: ರಾಜ್ಯ | 0

ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ ರಾವ್ ಅವರನ್ನು ಕಟೀಲು ಪಕ್ಷಕ್ಕೆ ಸ್ವಾಗತಿಸಿದರು.
ನಂತರ ಭಾಸ್ಕರ ರಾವ್‌ ಅವರು ಮಾತನಾಡಿ, ಎಎಪಿ‌ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಹಾಗೂ ಶೈಲಿಯಿಂದ ಬೆಳೆಯಲು ಅದಕ್ಕೆ ಸಾಧ್ಯವಾಗುತ್ತಿಲ್ಲ. ಈಗ ನಾನು ರಾಷ್ಟ್ರೀಯತೆಯನ್ನು ಆಳವಾಗಿ ಮೈಗೂಡಿಸಿಕೊಂಡಿರುವ ಬಿಜೆಪಿ ಸೇರಿದ್ದೇನೆ. ಬಾಲ್ಯದಿಂದಲೂ ನಾನು ರಾಷ್ಟ್ರೀಯತೆಗೆ ಬದ್ಧವಾಗಿದ್ದೇನೆ. ಹೀಗಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ಹೇಳಿದರು.
ಬಿಜೆಪಿಯಲ್ಲಿ ನಾನು ತೊಡಗಿಸಿಕೊಂಡು ಕೆಲಸ ಮಾಡುತ್ತೇನೆ. ಭಾರತ ಸಮೃದ್ಧವಾಗಿ ಗಟ್ಟಿಯಾಗಬೇಕು. ಬಿಜೆಪಿಯಿಂದ ಅದು ಸಾಧ್ಯ. ಅತ್ಯಂತ ಅನುಭವಿ ರಾಜಕಾರಣಿಗಳು ಇದ್ದಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷದಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್ ಉಚಿತ, ವಾಣಿಜ್ಯ ಬಳಕೆಗೆ ಇಲ್ಲ : ಸಿಎಂ ಸಿದ್ಧರಾಮಯ್ಯ.

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement