ಬೆಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪುತ್ತೂರಿನಿಂದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣದ ಆರೋಪಿ ಶಫಿ ಬೆಳ್ಳಾರಿ ಎಂಬಾತನನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಶಫಿ ಬೆಳ್ಳಾರೆ ಸೇರಿದಂತೆ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಎಸ್‌ಡಿಪಿಐ ಬಿಡುಗಡೆ ಮಾಡಿದೆ. ಜನವರಿ ತಿಂಗಳಲ್ಲಿ ಮೊದಲ ಪಟ್ಟಿಯಲ್ಲಿ ಒಟ್ಟು 10 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇಂದು, ಬುಧವಾರ ಎರಡನೇ ಪಟ್ಟಿಯಲ್ಲಿ ಒಟ್ಟು 9 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಹತ್ಯೆಗೆ ಈಗ ನಿಷೇಧಿತ ಪಿಎಫ್‌ಐ ಸಂಘಟನೆ ಕೊಲೆಗೆ ಸಂಚು ರೂಪಿಸಿದೆ ಎಂದು ಆರೋಪಿಸಲಾಗಿದೆ. ಪ್ರವೀಣ ನೆಟ್ಟಾರು ಅವರನ್ನು ಜುಲೈ 26, 2022 ರಂದು ಬೆಳ್ಳಾರೆಯ ಅವರ ಅಂಗಡಿ ಮುಂದೆ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ