ಆಪ್‌ಗೆ ಕರ್ನಾಟಕದಲ್ಲಿ ಆಘಾತ: ಆಪ್‌ಗೆ ಭಾಸ್ಕರ ರಾವ್‌ ಗುಡ್‌ ಬೈ..!

ಬೆಂಗಳೂರು: ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಅವರಿಗೆ ಶಾಕ್ ನೀಡಿದ್ದಾರೆ. ಅವರು ಎಎಪಿಗೆ ಗುಡ್ ಬೈ ಹೇಳಿ ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.
ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಇಂದು, ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.
ಮಂಗಳವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ ಭಾಸ್ಕರ ರಾವ್ ಅವರು ನಂತರ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿದಂತೆ ಹಲವು ನಾಯಕ ಜೊತೆ ಮಾತುಕತೆ ನಡೆಸಿದರು. ಮಾತುಕತೆಯ ಬಳಿಕ ಭಾಸ್ಕರ್ ರಾವ್ ಸೇರ್ಪಡೆ ಬಗ್ಗೆ ಬಿಜೆಪಿ ನಾಯಕರು ವರಿಷ್ಠರ ಗಮನಕ್ಕೆ ತಂದಿದ್ದರು. ಭಾಸ್ಕರ್ ರಾವ್ ಪಕ್ಷ ಸೇರ್ಪಡೆಗೆ ಹೈಕಮಾಂಡ್ ಅನುಮತಿ ನೀಡಿದೆ.
ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಹುದ್ದೆಗೆ ಅವರು ರಾಜೀನಾಮೆ ನೀಡಿ 2022ರ ಏಪ್ರಿಲ್‌ನಲ್ಲಿ ಆಪ್‌ ಪಕ್ಷವನ್ನು ಸೇರಿದ್ದರು. ಆಪ್‌ನಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಅದಕ್ಕಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಆದರೆ ಈಗ ಅವರು ಬಿಜೆಪಿ ಸೇರ್ಪಡೆಯಾಗುತ್ತಿರುವುದು ಅಚ್ಚರಿ ಮೂಡಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement