ಸಿಇಟಿ-2023: ಇಂದಿನಿಂದ ನೋಂದಣಿ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ನಾಳೆಯಿಂದ ( ಮಾರ್ಚ್‌ 2) ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆ-2023 ಅನ್ನು ಮೇ 20 ಮತ್ತು 21 ರಂದು ನಡೆಸಲಾಗುತ್ತದೆ. ಹಾಗೂ ಹೊರರಾಜ್ಯದ ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 22 ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ ಹೀಗಾಗಿ ಸಿಇಟಿ-2023ಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾರ್ಚ್‌ 2 ರಂದು ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದೆ. ಆನ್‍ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-04-2023 ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 07-04-2023 ಆಗಿದೆ.
ಆನ್‍ ಲೈನ್ ಅರ್ಜಿಯಲ್ಲಿ ಅಭ್ಯರ್ಥಿಯು ನಮೂದಿಸುವ ಜಾತಿ / ಜಾತಿ ಆದಾಯ ಪ್ರಮಾಣ ಪತ್ರದ ಆರ್‍.ಡಿ ಸಂಖ್ಯೆಯನ್ನು ಮತ್ತು 371(ಜೆ) ಆರ್‍ ಡಿ ಸಂಖ್ಯೆಯನ್ನು ಆಧರಿಸಿ ಅಭ್ಯರ್ಥಿಯ ಜಾತಿ, ಆದಾಯ ಮತ್ತು 371(ಜೆ) ಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್‍ ಸೇವೆಯ ಮೂಲಕ ಪರಿಶೀಲಿಸಲಾಗುತ್ತದೆ. ಅಭ್ಯರ್ಥಿಗಳು ಎಚ್ಚರದಿಂದ ಸರಿಯಾದ ಆರ್‍ ಡಿ ಸಂಖ್ಯೆಯನ್ನು ಆನ್‍ ಲೈನ್ ಅರ್ಜಿಯಲ್ಲಿ ದಾಖಲಿಸಲು ಸೂಚಿಸಿದೆ. ಒಂದು ವೇಳೆ ಅಭ್ಯರ್ಥಿಯು ದಾಖಲಿಸುವ ಆರ್‍ ಡಿ ಸಂಖ್ಯೆ ತಾಳೆಯಾಗದಿದ್ದಲ್ಲಿ, ಜೂನ್ 2023ರ ಮಾಹೆಯಲ್ಲಿ ಪ್ರಾಧಿಕಾರವು ನೀಡುವ ವೇಳಾಪಟ್ಟಿಯಂತೆ ಖುದ್ದಾಗಿ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

ಆನ್‍ ಲೈನ್ ಅಪ್ಲಿಕೇಶನ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಆನ್‍ಲೈನ್ ಅರ್ಜಿಯ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದಾಗಿದೆ. ಅಭ್ಯರ್ಥಿಗಳು ಆನ್‍ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಬಗ್ಗೆ ಸಂದೇಹಗಳಿದ್ದಲ್ಲಿ, ಪ್ರಾಧಿಕಾರದ ಇಮೇಲ್ [email protected]ಗೆ ಮೇಲ್ ಮಾಡುವ ಮೂಲಕ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.
ಮೊಬೈಲ್ ಮೂಲಕ ಆನ್‍ ಲೈನ್ ಅರ್ಜಿಗಳನ್ನು ಭರ್ತಿ ಮಾಡಬಹುದು.
ಸಾಮಾನ್ಯ ಪ್ರವೇಶ ಪರೀಕ್ಷೆ 2023ರ ವೇಳಾಪಟ್ಟಿ
20-05-2023 ಶನಿವಾರ ಬೆಳಿಗ್ಗೆ 10:30ರಿಂದ 11:50ರವರೆಗೆ ಜೀವಶಾಸ್ತ್ರ (60 ಅಂಕ) ಮಧ್ಯಾಹ್ನ 2:30 ರಿಂದ 3:50ರ ವರೆಗೆ ಗಣಿತಶಾಸ್ತ್ರ(60 ಅಂಕ) ಪರೀಕ್ಷೆ ನಡೆಯಲಿದೆ.
21-05-2023 ರಂದು ಭಾನುವಾರ ಬೆಳಿಗ್ಗೆ 10:30ರಿಂದ 11:50ರ ವರೆಗೆ ಭೌತಶಾಸ್ತ್ರ (60 ಅಂಕ) ಮಧ್ಯಾಹ್ನ 2:30 ರಿಂದ 3:50ರ ವರೆಗೆ ರಸಾಯನಶಾಸ್ತ್ರ (60 ಅಂಕ) ವಿಷಯದ ಪರೀಕ್ಷೆ ನಡೆಯಲಿದೆ.
22-05-2023ಸೋಮವಾರ ಬೆಳಿಗ್ಗೆ 11:30 ರಿಂದ 12:30 ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement