4 ವರ್ಷದ ಮಗಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಮತ್ತೋರ್ವ ಮಗಳು ಪಾರು

ಮಂಗಳೂರು: ನಗರದ ಕೊಡಿಯಾಲ್ ಗುತ್ತಿನಲ್ಲಿ ಮಹಿಳೆ ತನ್ನ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ.
ಕೊಡಿಯಾಲ್ ಬೈಲ್ ಗುತ್ತು ಬಳಿ ಘಟನೆ ಸಂಭವಿಸಿದ್ದು ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. 12 ವರ್ಷದ ಯಜ್ಞಾ ಬದುಕುಳಿದಿದ್ದಾಳೆ.
ವಿಜಯ ತನ್ನ ಇಬ್ಬರು ಮಕ್ಕಳಿಗೂ ಕುಣಿಕೆ ಹಾಕಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಆದರೆ 12 ವರ್ಷದ ಯಜ್ಞಾ ಟಿಪಾಯಿ ಆಸರೆಯಿಂದ ಬದುಕಿದ್ದು, ಸಹಾಯಕ್ಕೆ ಕೂಗಿಕೊಂಡಿದ್ದಾಳೆ. ತಕ್ಷಣವೇ ಅಕ್ಕಪಕ್ಕದವರು ಬಂದು ರಕ್ಷಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ತಾಯಿ ವಿಜಯ ಹಾಗೂ ಮಗಳು ಶೋಭಿತಾ ಮೃತಪಟ್ಟಿದ್ದರು ಎನ್ನಲಾಗಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ನಿಖರ ಕಾರಣ ಹಾಗೂ ವಿವರ ತಿಳಿದುಬರಬೇಕಿದೆ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement