ಬೆಂಗಳೂರು : ಕ್ಯಾನ್ಸರ್‌ಗೆ ಹೆದರಿದ ಗಂಡ ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ನಂತರ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದ್ದು, ನಾಗೇಂದ್ರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಪತ್ನಿ ವಿಜಯ (28), ಮಕ್ಕಳಾದ ನಿಷಾ (7), ದೀಕ್ಷಾ (5) ಅವರಿಗೆ ವಿಷವುಣಿಸಿದ್ದಾನೆ. ಅವರು ಸಾವಿಗೀಡಾದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
2014ರಲ್ಲಿ ದಂಪತಿ ಮದುವೆಯಾಗಿದ್ದರು. ಕೆಲವು ವರ್ಷಗಳಿಂದ ನಾಗೇಂದ್ರ ಕ್ಯಾನ್ಸರ್ ನಿಂದ ಬಳಲುತ್ತಿದ್ದ. ಪತ್ನಿ ವಿಜಯ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಊಟದಲ್ಲಿ ತಿಗಣೆ ಔಷಧಿ, ಇಲಿ ಔಷಧಿ ಬೆರೆಸಿ ಹೆಂಡತಿ ಮಕ್ಕಳನ್ನ ಕೊಂದಿದ್ದಾನೆ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ