ಬೆಳಗಾವಿ : ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ : ಬೆಳಗಾವಿ ತಾಲೂಕು ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಡಬೇಕು ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರ ಕನಸು ಈಡೇರಿದೆ.
ಗುರುವಾರ ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಛತ್ರಪತಿ ಮಹಾರಾಜರ ಮೂರ್ತಿಯನ್ನು ಅನಾವರಣ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಚ್ 5 ರಂದು ಮಹಾರಾಷ್ಟ್ರದ ಕೆಲ ಕಾಂಗ್ರೆಸ್ ನಾಯಕರನ್ನು ಕರೆ ತಂದು ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಂದಾಗಿದ್ದರು. ರಮೇಶ ಜಾರಕಿಹೊಳಿ ಸೇರಿದಂತೆ ಬೆಳಗಾವಿಯ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ರಾಜಹಂಸಗಡ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರತಿಷ್ಠೆಯ ಕದನವಾಗಿ ಪರಿವರ್ತನೆಗೊಂಡಿತ್ತು.
ಕರ್ನಾಟಕ ಸರಕಾರದ ಅನುದಾನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣವಾಗಿದೆ, ಇದನ್ನು ಸರಕಾರಿ ಕಾರ್ಯಕ್ರಮವಾಗಿ ನಡೆಸಬೇಕು ಎಂದು ರಮೇಶ ಜಾರಕಿಹೊಳಿ ಪಟ್ಟು ಹಿಡಿದಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರ್ಯಕ್ರಮ ಮಾರ್ಚ್ 5 ರಂದು ನಿಗದಿಯಾಗಿತ್ತು.ಆದರೆ ರಮೇಶ ಜಾರಕಿಹೊಳಿ ಮುಖ್ಯಮಂತ್ರಿ ಅವರನ್ನು ಒಪ್ಪಿಸಿ ಗುರುವಾರವೇ ಕಾರ್ಯಕ್ರಮವನ್ನು ನಿಗದಿಪಡಿಸಿ ಅದನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಇಂದು, ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ್ದಾರೆ. ಶಿವಾಜಿ ಪ್ರತಿಮೆ ಎದುರು ನಗಾರಿ ಬಾರಿಸಿ ಪ್ರತಿಮೆಗೆ ಹೂವು ಸಮರ್ಪಿಸಿದ್ದಾರೆ. ಅಲ್ಲದೆ, ರಾಜಹಂಸಗಡ ಕೋಟೆಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಲಾಗಿದೆ. ಗಾರ್ಡನ್, ಕೋಟೆ ನವೀಕರಣ, ನೀರಿನ ವ್ಯವಸ್ಥೆ ಸೇರಿದಂತೆ ಹಲವು ಕಾರ್ಯಕ್ರಮ ಉದ್ಘಾಟಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಅಭಯ್ ಪಾಟೀಲ, ಅನಿಲ್ ಬೆನಕೆ ಭಾಗಿ‌ಯಾಗಿದ್ದರು. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗಿದ್ದಾರೆ.
ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದ ವಿಚಾರದಲ್ಲಿ ಕೊನೆಗೂ ರಮೇಶ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ.

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement