40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

ಬೆಂಗಳೂರು: ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಪ್ರಶಾಂತ ಮಾಡಾಳ ಪ್ರಶಾಂತ ಮಾಡಾಳ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.
ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಎಂದು ಹೇಳಲಾಗಿದೆ.
ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್​ಗಾಗಿ ಲಂಚ ಸ್ವೀಕರಿಸುವಾಗ ಪ್ರಶಾಂತ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ವರದಿಯ ಪ್ರಕಾರ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ವಸ್ತು ಖರೀದಿ ಸಂಬಂಧ ಟೆಂಡರ್‌ ಅನುಮೋದನೆಗೆ 80 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.

ಗುರುವಾರ ಸಂಜೆ ಖಾಸಗಿ ಕಚೇರಿಯಲ್ಲಿ 40 ಲಕ್ಷ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಅವರನ್ನು ಸದ್ಯ ಲೋಕಾಯಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಮಾಡಾಳ ಪ್ರಶಾಂತ ಕಚೇರಿ ಕಲೆಕ್ಷನ್​ ಸೆಂಟರ್​ ಆಗಿರುವ ಶಂಕೆ ವ್ಯಕ್ತವಾಗಿದೆ.ಮಾಡಾಳ್‌ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರಾಗಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement