ನವದೆಹಲಿ: ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಅವರನ್ನು ನಿಗಾದಲ್ಲಿಟ್ಟು ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಬ್ರಾಂಕೈಟಿಸ್ನಿಂದಾಗಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆಸ್ಟ್ ಮೆಡಿಸಿನ್ನ ಹಿರಿಯ ಸಲಹೆಗಾರ ಡಾ ಅರೂಪ್ ಬಸು ಮತ್ತು ಅವರ ತಂಡದ ಆರೈಕೆಯಲ್ಲಿದ್ದಾರೆ.ಈ ವರ್ಷ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ.
ಜನವರಿಯಲ್ಲಿ, 76 ವರ್ಷದ ಸೋನಿಯಾ ಗಾಂಧಿ ಅವರನ್ನು ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ