ʼಪರಾರಿಯಾಗಿರುವ ಆರ್ಥಿಕ ಅಪರಾಧಿʼ ಎಂದು ಘೋಷಿಸುವುದನ್ನು ಪ್ರಶ್ನಿಸಿದ್ದ ವಿಜಯ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ತನ್ನನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿ ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಂಬೈ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರಶ್ನಿಸಿ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಮಲ್ಯ ಪರವಾಗಿ ಹಾಜರಾದ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ತಮಗೆ ತಮ್ಮ ಕಕ್ಷಿದಾರರೊಂದಿಗೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಮತ್ತು ಈ ವಿಷಯದ ಬಗ್ಗೆ ಯಾವುದೇ ಸೂಚನೆಗಳನ್ನು ಪಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು
ಅರ್ಜಿದಾರರು ವಕೀಲರಿಗೆ ಯಾವುದೇ ಸೂಚನೆಗಳನ್ನು ನೀಡುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ಈ ಹೇಳಿಕೆಯನ್ನು ಪರಿಗಣಿಸಿ, ಪ್ರಾಸಿಕ್ಯೂಷನ್ ಇಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ಪೀಠವು ಹೇಳಿದೆ.

ಮಲ್ಯ ಅರ್ಜಿ ಆಧರಿಸಿ ಸುಪ್ರೀಂ ಕೋರ್ಟ್ 2018ರ ಡಿ. 7ರಂದು ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿತ್ತು. ಮಲ್ಯ ಅವರನ್ನು ಪಲಾಯನಗೊಂಡಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ಕೋರಿ ಇ.ಡಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಜನವರಿ 5, 2019 ರಂದು, ಮುಂಬೈ ವಿಶೇಷ ನ್ಯಾಯಾಲಯವು ಮಲ್ಯ ಅವರನ್ನು ಈ ಕಾಯ್ದೆಯಡಿ ‘ಪರಾರಿ’ ಎಂದು ಘೋಷಿಸಿತ್ತು.
ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ, ಒಬ್ಬ ವ್ಯಕ್ತಿಯನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಿದ ನಂತರ, ಪ್ರಾಸಿಕ್ಯೂಟಿಂಗ್ ಏಜೆನ್ಸಿಯು ಆತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಹೊಂದಿರುತ್ತದೆ.
ಹಲವಾರು ಬ್ಯಾಂಕ್‌ಗಳಿಂದ ಕಿಂಗ್‌ಫಿಶರ್ ಏರ್‌ಲೈನ್ಸ್ (ಕೆಎಫ್‌ಎ) ಗೆ ಸಾಲ ಪಡೆದಿದ್ದ ವಿಜಯ ಮಲ್ಯ ಮಾರ್ಚ್ 2016 ರಲ್ಲಿ ಯುನೈಟೆಡ್ ಕಿಂಗ್‌ಡಮ್‌ಗೆ ಪಲಾಯನ ಮಾಡಿದ್ದಾನೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement