ಬಿಜೆಪಿ ಶಾಸಕನ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ನಗದು ವಶ…!

ಬೆಂಗಳೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದ ದಾವಣಗೆರೆ ಜಿಲ್ಲೆ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಶೋಧ ಕಾರ್ಯ ಮುಗಿದ ನಂತರ ಪ್ರಶಾಂತ ಮಾಡಾಳ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರನನ್ನು ಶುಕ್ರವಾರ ಬೆಳಗ್ಗೆ ಬಂಧಿಸಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಅವರ ಮನೆಯಿಂದ 6 ಕೋಟಿ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಲೋಕಾಯುಕ್ತವು ಶಾಸಕರನ್ನೂ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.
ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಗುರುವಾರ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ.
40 ಲಕ್ಷ ರೂ. ಲಂಚದ ಹೊರತಾಗಿ, ಲೋಕಾಯುಕ್ತರು ಪ್ರಶಾಂತ ಮಾಡಾಳ ಅವರ ಕಚೇರಿಯಲ್ಲಿ 1.7 ಕೋಟಿ ರೂ.ಗಳನ್ನೂ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಶಾಸಕರ ಪುತ್ರ ಪ್ರಶಾಂತ ಮಾಡಾಳ ಬಿಡಬ್ಲ್ಯುಎಸ್‌ಎಸ್‌ಬಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌(KSDL)ನ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದ್ದು, ಮುಂಗಡವಾಗಿ 40 ಲಕ್ಷ ರೂ.ಗಳನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು. ಮಾಡಾಳ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ ಅಧ್ಯಕ್ಷರು.
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಪ್ರಶಾಂತ ವಿರುದ್ಧ ಲಂಚದ ಆರೋಪದ ಮೇಲೆ ದೂರು ದಾಖಲಿಸಿದ್ದರು. ಅದರಂತೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಪ್ರಶಾಂತ ಗುರುವಾರ 40 ಲಕ್ಷ ರೂ.ಗಳನ್ನು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ.

ಲೋಕಾಯುಕ್ತದ ಅಧಿಕಾರಿಯೊಬ್ಬರು, ನಾವು ಅವರ ಕಚೇರಿಯಲ್ಲಿ ತಪಾಸಣೆ ನಡೆಸಿದ್ದೇವೆ ಮತ್ತು 1.7 ಕೋಟಿ ರೂ. ಪತ್ತೆಯಾಗಿದೆ. ಪ್ರಶಾಂತ ತಂದೆಯ ಪರವಾಗಿ ಲಂಚ ಪಡೆಯುತ್ತಿದ್ದಾರೆ ಎಂದು ಶಂಕಿಸಲಾಗಿದೆ. ನಾವು ಅವರ ಕಚೇರಿಯಲ್ಲಿ ಸಿಕ್ಕ ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement