“ನಮ್ಮದು ಏಕಾಂಗಿ ಹೋರಾಟ”: 2024ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಘೋಷಿಸಿದ್ದಾರೆ.
ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿವೆ ಎಂದು ಆರೋಪಿಸಿದ ಅವರು, ಅಪವಿತ್ರ ಮೈತ್ರಿ ಮಾಡಿಕೊಂಡರೆ ಬಿಜೆಪಿ ಜೊತೆ ಕಾಂಗ್ರೆಸ್ ಹೇಗೆ ಸೆಣಸುತ್ತದೆ, ಬಿಜೆಪಿ ವಿರುದ್ಧ ಎಡಪಕ್ಷಗಳು ಹೇಗೆ ಹೋರಾಡುತ್ತವೆ… ಸಿಪಿಎಂ ಮತ್ತು ಕಾಂಗ್ರೆಸ್ ತಾವು ಬಿಜೆಪಿ ವಿರೋಧಿಗಳೆಂದು ಹೇಗೆ ಹೇಳಿಕೊಳ್ಳುತ್ತವೆ ? ಎಂದು ಅವರು ಪ್ರಶ್ನಿಸಿದ್ದಾರೆ.
ಬಂಗಾಳದ ಸರ್ದಿಘಿಯಲ್ಲಿ ವಿಧಾನಸಭೆ ಸ್ಥಾನಕ್ಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಪಕ್ಷದಿಂದ ಅದನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದನ್ನು ಅವರು ಉಲ್ಲೇಖಿಸಿ ಈ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್, ಎಡ ಮತ್ತು ಬಿಜೆಪಿ ಎಲ್ಲರೂ ಸರ್ದಿಘಿಯಲ್ಲಿ “ಕೋಮು ಕಾರ್ಡ್” ಚಲಾವಣೆ ಮಾಡಿದ್ದಾರೆ ಎಂದು ಹೇಳಿದ ಅವರು, ವ್ಯತ್ಯಾಸವೆಂದರೆ “ಬಿಜೆಪಿ ಇದನ್ನು ಬಹಿರಂಗವಾಗಿ ಚಲಾವಣೆ ಮಾಡಿದೆ, ಆದರೆ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಒಳಗಿಂದೊಳಗೆ ಕೋಮು ಕಾರ್ಡ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ಲೇಯ್‌ ಮಾಡಿದೆ ಎಂದು ಆರೋಪಿಸಿದ್ದಾರೆ. ಇದು ನಾವು ಸಿಪಿಎಂ ಅಥವಾ ಕಾಂಗ್ರೆಸ್ ಮಾತನ್ನು ಕೇಳಬಾರದು ಎಂಬ ಪಾಠವಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಬಿಜೆಪಿಯೊಂದಿಗೆ ಕೆಲಸ ಮಾಡುವವರ ಜೊತೆ ನಾವು ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ 2024 ರಲ್ಲಿ, ನಾವು ತೃಣಮೂಲ ಕಾಂಗ್ರೆಸ್‌ ಮತ್ತು ಜನರ ನಡುವೆ ಮೈತ್ರಿಯನ್ನು ನೋಡುತ್ತೇವೆ. ನಾವು ಇತರ ಯಾವುದೇ ರಾಜಕೀಯ ಪಕ್ಷಗಳ ಜೊತೆಗೆ ಹೋಗುವುದಿಲ್ಲ. ನಾವು ಜನರ ಬೆಂಬಲದೊಂದಿಗೆ ಏಕಾಂಗಿಯಾಗಿ ಹೋರಾಡುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಯನ್ನು ಸೋಲಿಸಲು ಬಯಸುವವರು, ಅವರು ನಮಗೆ ಮತ ಹಾಕುತ್ತಾರೆ ಎಂದು ನಾನು ನಂಬುತ್ತೇನೆ, ಅಲ್ಲದೆ, ಸಿಪಿಎಂ ಮತ್ತು ಕಾಂಗ್ರೆಸ್‌ಗೆ ಮತ ನೀಡುವವರು ನಿಜವಾಗಿ ಬಿಜೆಪಿಗೆ ಮತ ಹಾಕುತ್ತಾರೆ ಎಂದು ನಾನು ನಂಬುತ್ತೇನೆ. ಈ ಸತ್ಯ ಇಂದು, ಗುರುವಾರ ಬೆಳಕಿಗೆ ಬಂದಿದೆ ಎಂದು ಅವರು ತ್ರಿಪುರಾದಲ್ಲಿನ ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ತ್ರಿಪುರಾದಲ್ಲಿ ಮಮತಾ ಬ್ಯಾನರ್ಜಿಯವರ ತೃಮೂಲ ಕಾಂಗ್ರೆಸ್‌ ಪಕ್ಷವು 60 ಸ್ಥಾನಗಳಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement