ಬಿಜೆಪಿ ಶಾಸಕರ ಪುತ್ರ ಪ್ರಶಾಂತ​​ ಮಾಡಾಳಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಗುರುವಾರ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ ಮಾಡಾಳ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಹಾಜರುಪಡಿಸಿದ್ದರು. ಪ್ರಶಾಂತ ಮಡಾಳ ಸೇರಿ ಐವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಲೋಕಾಯುಕ್ತ ಕೋರ್ಟ್ ಆದೇಶಿಸಿದೆ.

ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆ ಮತ್ತು ಕಚೇರಿಯಿಂದ ಇದುವರೆಗೆ 7.62 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಶಾಂತ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಬ್ಬ ಅಧಿಕಾರಿಯಾಗಿದ್ದು ನಿಯೋಜನೆ ಮೇರೆಗೆ ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಿನ್ನೆ ಸಂಜೆ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ (ಕೆಎಸ್ ಡಿಎಲ್) (KSDL) ಕೆಮಿಕಲ್ ಪೂರೈಸುವ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗುತ್ತಿಗೆಗದಾರರಿಗೆ ಕಾರ್ಯಾದೇಶ ನೀಡಲು ಲಂಚದ ರೂಪದಲ್ಲಿ ರೂ. 40 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement