ಮೇಘಾಲಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿ ರಾಜ್ಯಪಾಲರಿಗೆ 32 ಶಾಸಕರ ಬೆಂಬಲ ಪತ್ರ ಸಲ್ಲಿಸಿದ ಕಾನ್ರಾಡ್ ಸಂಗ್ಮಾ

ನವದೆಹಲಿ: ನ್ಯಾಷನಲ್ ಪೀಪಲ್ಸ್ ಪಾರ್ಟಿ (National People’s Party) ಅಧ್ಯಕ್ಷ ಕಾನ್ರಾಡ್ ಕೆ ಸಂಗ್ಮಾ ಅವರು ಶುಕ್ರವಾರ ರಾಜ್ಯಪಾಲರನ್ನು ಭೇಟಿಯಾಗಿದ್ದು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಂದರ್ಭದಲ್ಲಿ ಅವರು ಬಿಜೆಪಿ (BJP), ಎನ್‌ಪಿಪಿ, ಎಚ್‌ಎಸ್‌ಪಿಡಿಪಿ ಮತ್ತು ಇಬ್ಬರು ಪಕ್ಷೇತರ ಶಾಸಕರು ಸಹಿ ಮಾಡಿರುವ ‘ಬೆಂಬಲ ಪತ್ರ’ವನ್ನು ಮೇಘಾಲಯದ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಸಲ್ಲಿಸಿದ್ದಾರೆ. ಸಂಗ್ಮಾ ಅವರು ರಾಜ್ಯಪಾಲರೊಂದಿಗೆ ಇರುವ ಚಿತ್ರವನ್ನು ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 60 ಸದಸ್ಯ ಬಲದ ವಿಧಾನಸಭೆಯಲ್ಲಿ 32 ಕ್ಕೂ ಹೆಚ್ಚು ಶಾಸಕರೊಂದಿಗೆ ಬೆಂಬಲ ಪಡೆದು ಬಹುಮತ ಹೊಂದಿದ್ದೇನೆ ಎಂದು ನಿರ್ಗಮಿತ ಮುಖ್ಯಮಂತ್ರಿ ಸಾಂಗ್ಮಾ ಹಿಂದಿನ ದಿನ ರಾಜ್ಯಪಾಲರಿಗೆ ತಿಳಿಸಿದ್ದರು. ಇಂದು ಶುಕ್ರವಾರ ಅವರು 32 ಕ್ಕೂ ಹೆಚ್ಚು ಶಾಸಕರ ಬೆಂಲದ ಪಟ್ಟಿಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ.
ಒಟ್ಟು 59 ಸ್ಥಾನಗಳಲ್ಲಿ 26 ಸ್ಥಾನಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಎನ್ ಪಿಪಿ ಮೇಘಾಲಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತಕ್ಕೆ ಕೆಲವು ಸ್ಥಾನಗಳು ಬೇಕಾಗಿವೆ. ಕಳೆದ ಐದು ವರ್ಷಗಳಿಂದ ಎನ್‌ಪಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ ಚುನಾವಣೆ ವೇಳೆ ಏಕಾಂಗಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಏತನ್ಮಧ್ಯೆ, ಬಿಜೆಪಿ, ಎಚ್‌ಎಸ್‌ಪಿಡಿಪಿ ಮತ್ತು ಪಿಡಿಎಫ್ ತಲಾ ಎರಡು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸಹ ಗೆಲುವು ಕಂಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement