ಸೋನಿಯಾ ಗಾಂಧಿ ಗಂಗಾರಾಂ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಅವರನ್ನು ನಿಗಾದಲ್ಲಿಟ್ಟು ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಬ್ರಾಂಕೈಟಿಸ್‌ನಿಂದಾಗಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆಸ್ಟ್ ಮೆಡಿಸಿನ್‌ನ ಹಿರಿಯ ಸಲಹೆಗಾರ ಡಾ … Continued

ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ಒಳಗಾಗಿದೆ, ಪೆಗಾಸಸ್ ಮೂಲಕ ನನ್ನ ಮೇಲೆ ಗೂಢಚರ್ಯೆ ನಡೆಸುತ್ತಿದ್ದರು: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ತಮ್ಮ ಉಪನ್ಯಾಸದ ಸಂದರ್ಭದಲ್ಲಿ, ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಅಗತ್ಯವಾದ ಸಾಂಸ್ಥಿಕ ಚೌಕಟ್ಟು ನಿರ್ಬಂಧಿತವಾಗುತ್ತಿದ್ದು, ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯು ಈಗ ದಾಳಿಗೆ ಒಳಗಾಗುತ್ತಿದೆ ಎಂದು ಹೇಳಿದ್ದಾರೆ. ಸರ್ಕಾರ ತನ್ನ ಮೇಲೆ ಬೇಹುಗಾರಿಕೆ ನಡೆಸಲು ಪೆಗಾಸಸ್ ಅನ್ನು ಬಳಸುತ್ತಿದೆ ಎಂದು ಅವರು ಹೇಳಿದರು. ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ … Continued

ಬಿಜೆಪಿ ಶಾಸಕರ ಪುತ್ರ ಪ್ರಶಾಂತ​​ ಮಾಡಾಳಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಗುರುವಾರ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ ಮಾಡಾಳ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಹಾಜರುಪಡಿಸಿದ್ದರು. … Continued

ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಮಗ : ಕೆಎಸ್​ಡಿಎಲ್ ಅಧ್ಯಕ್ಷರ ಹುದ್ದೆಗೆ ರಾಜೀನಾಮೆ ನೀಡಿದ ಶಾಸಕ ಮಾಡಾಳ ವಿರೂಪಾಕ್ಷಪ್ಪ

ಬೆಂಗಳೂರು: 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ ವೇಳೆ ತಮ್ಮ ಪುತ್ರ ಪ್ರಶಾಂತ ಮಾಡಾಳ (Prashant Madal) ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಬೆನ್ನಲ್ಲೇ ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Virupakshappa Madal) ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್​ಡಿಎಲ್) ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಶಾಸಕರು … Continued

ಗಡಿ ಕಣ್ಗಾವಲಿಗೆ ಜೆಟ್‌ಪ್ಯಾಕ್ ತಂತ್ರಜ್ಞಾನ ಪರೀಕ್ಷಿಸಿದ ಭಾರತೀಯ ಸೇನೆ- ಈ ಜೆಟ್‌ಪ್ಯಾಕ್‌ ಸೂಟ್‌ ಧರಿಸಿ ಗಾಳಿಯಲ್ಲಿ ಹಾರಾಟ ಮಾಡಬಹುದು | ವೀಕ್ಷಿಸಿ

ನವದೆಹಲಿ: ಚೀನಾದೊಂದಿಗಿನ ಗಡಿಗಳು ಸೇರಿದಂತೆ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಯುದ್ಧತಂತ್ರವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಭಾರತೀಯ ಸೇನೆಯು ಬ್ರಿಟಿಷ್ ಕಂಪನಿ ಗ್ರಾವಿಟಿ ಇಂಡಸ್ಟ್ರೀಸ್ ಅಭಿವೃದ್ಧಿಪಡಿಸಿದ ಜೆಟ್‌ಪ್ಯಾಕ್ ಸೂಟ್‌ಗಳ ಪರೀಕ್ಷೆ ನಡೆಸಿದೆ. ಆಗ್ರಾದ ಭಾರತೀಯ ಸೇನಾ ವಾಯುಗಾಮಿ ತರಬೇತಿ ಶಾಲೆ (Indian Army Airborne Training School)ನಲ್ಲಿ ಸಾಧನದ ಡೆಮೊವನ್ನು ಮಂಗಳವಾರ ನಡೆಸಲಾಯಿತು ಎಂದು ಅಧಿಕಾರಿಗಳು ಪ್ರಕಟಿಸಿದರು. ಟ್ವಿಟರ್‌ನಲ್ಲಿ, … Continued

ಬಿಜೆಪಿ ಶಾಸಕನ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ನಗದು ವಶ…!

ಬೆಂಗಳೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದ ದಾವಣಗೆರೆ ಜಿಲ್ಲೆ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಶೋಧ ಕಾರ್ಯ ಮುಗಿದ ನಂತರ ಪ್ರಶಾಂತ ಮಾಡಾಳ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರನನ್ನು ಶುಕ್ರವಾರ ಬೆಳಗ್ಗೆ … Continued

“ನಮ್ಮದು ಏಕಾಂಗಿ ಹೋರಾಟ”: 2024ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಘೋಷಿಸಿದ್ದಾರೆ. ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿವೆ ಎಂದು ಆರೋಪಿಸಿದ ಅವರು, ಅಪವಿತ್ರ ಮೈತ್ರಿ ಮಾಡಿಕೊಂಡರೆ ಬಿಜೆಪಿ ಜೊತೆ ಕಾಂಗ್ರೆಸ್ ಹೇಗೆ ಸೆಣಸುತ್ತದೆ, … Continued

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಕಾರ್ಯ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾವೇರಿ 2.0 ತಂತ್ರಾಂಶದ ಕುರಿತು ಮಾತನಾಡಿದ ಅವರು, ಈ ತಂತ್ರಾಂಶ ನಾಗರೀಕ ಸ್ನೇಹಿಯಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ಬೀಳಲಿದೆ. ವರ್ಷದೊಳಗೆ ಅರ್ಜಿ ಹಾಕುವುದನ್ನು ತಪ್ಪಿಸಿ, ಆನ್ ಲೈನ್ನಲ್ಲಿ … Continued