8 ಕೋಟಿ ಅಕ್ರಮ ಹಣ ಸಿಕ್ಕರೂ ಶಾಸಕ ವಿರೂಪಾಕ್ಷಪ್ಪ ಅವರನ್ನು ಯಾಕೆ ಬಂಧಿಸಿಲ್ಲ : ಬಿಜೆಪಿಗೆ ಕೇಜ್ರಿವಾಲ್‌ ಪ್ರಶ್ನೆ

 ದಾವಣಗೆರೆ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ನಿವಾಸದಿಂದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ವಶ ಪಡಿಸಿಕೊಂಡ ನಂತರವೂ ಅವರನ್ನು ಏಕೆ ಬಂಧಿಸಿಲ್ಲ ಎಂದು ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರವಿದೆ” ಎಂದು ಅವರು ಆರೋಪಿಸಿದರು.
ದಾವಣಗೆರೆಯ (Davanagere) ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ಆರಂಭಿಸಿ ಮಾತನಾಡಿದ ಅವರು, ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಅವರಿಂದ ಅಕ್ರಮ ಹಣ 8.23 ಕೋಟಿ ರೂ.ಗಳನ್ನು ಲೋಕಾಯುಕ್ತ ವಶಪಡಿಸಿಕೊಂಡಿದ್ದನ್ನು ಪ್ರಸ್ತಾಪಿಸಿ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನಿವಾಸದಲ್ಲಿ ದಾಳಿ ವೇಳೆ ಸಿಕ್ಕಿದ್ದು ಕೇವಲ ಹತ್ತು ಸಾವಿರ ರೂ.ಗಳು. ಆದರೆ ಕರ್ನಾಟಕದಲ್ಲಿ ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಅವರಿಂದ ಶಾಸಕರಿಗೆ ಸಂಬಂಧಿಸಿದ ನಿವಾಸದಲ್ಲಿ 8.23 ಕೋಟಿ ರೂ.ಅಕ್ರಮ ಹಣ ವಶಕ್ಕೆ ಪಡೆಯಲಾಗಿದೆ. ಆದರೂ ಶಾಸಕರನ್ನು ಬಂಧಿಸಲಾಗಿಲ್ಲ ಎಂದು ಏಕೆ ಎಂದು ಪ್ರಶ್ನಿಸಿದರು.
ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ನೀಡುವಂತೆ ಜನತೆಗೆ ಮನವಿ ಮಾಡಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಮನವಿ ಮಾಡಿದ್ದಾರೆ. ಆದರೆ ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ ಏಕೆ ಭ್ರಷ್ಟಾಚಾರವನ್ನು ತೊಡೆದುಹಾಕಲು ಸಾಧ್ಯವಾಗಲಿಲ್ಲ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಹೇಳಿದರು.
ಅಮಿತ್ ಶಾ ದೆಹಲಿಗೆ ವಾಪಸಾದ ಮರುದಿನವೇ ಬಿಜೆಪಿ ಶಾಸಕರೊಬ್ಬರ ಪುತ್ರ ಲೆಕ್ಕಕ್ಕೆ ಸಿಗದ ಕೋಟಿಗಟ್ಟಲೆ ಹಣದೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು.
ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವುದನ್ನು ಉಲ್ಲೇಖಿಸಿ ಕೇಜ್ರಿವಾಲ್, ದಾವಣಗೆರೆ ಮೂಲದ ಬಿಜೆಪಿ ಶಾಸಕರನ್ನು ಇನ್ನೂ ಬಂಧಿಸಲಾಗಿಲ್ಲ, ಬದಲಿಗೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.
ಕರ್ನಾಟಕದಲ್ಲಿ ಸಚಿವರುಗಳು ಶೇ 40ರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಗುತ್ತಿಗೆದಾರರು, ಖಾಸಗಿ ಅನುದಾನರಹಿತ ಶಾಲೆಗಳು ಮತ್ತು ಮಠಗಳಿಂದ (ಅಶ್ರಮ) 40 ಪ್ರತಿಶತ ಕಮಿಷನ್ ಪಡೆಯಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರ’ (ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಆಡಳಿತ) ಎಂದು ಹೆಮ್ಮೆಪಡುವ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕೇಜ್ರಿವಾಲ್, “ಡಬಲ್ ಇಂಜಿನ್ ಸರ್ಕಾರದಲ್ಲಿ ಭ್ರಷ್ಟಾಚಾರ ದ್ವಿಗುಣಗೊಳ್ಳುತ್ತದೆ, ನಮಗೆ ಹೊಸ ಸರ್ಕಾರಿ ಎಂಜಿನ್ ಬೇಕು ಎಂದು ಹೇಳಿದರು.
ಕರ್ನಾಟಕವನ್ನು ಪರಿವರ್ತಿಸಲು ಎಎಪಿಗೆ ಅವಕಾಶ ನೀಡಬೇಕೆಂದು ಅವರು ರಾಜ್ಯದ ಜನತೆಗೆ ಮನವಿ ಮಾಡಿದರು.
ನಾವು ಕಟ್ಟಾ ಪ್ರಾಮಾಣಿಕರು. ಭ್ರಷ್ಟಾಚಾರ ರಹಿತ ಸರಕಾರ ನೀಡುತ್ತೇವೆ. ಉಚಿತ ವಿದ್ಯುತ್ ನೀಡುತ್ತೇವೆ, ಉತ್ತಮ ಸರ್ಕಾರಿ ಶಾಲೆಗಳನ್ನು ನಿರ್ಮಿಸುತ್ತೇವೆ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತೇವೆ” ಎಂದು ಕೇಜ್ರಿವಾಲ್ ಹೇಳಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement