ಎಸ್​.ಎಂ. ಕೃಷ್ಣ ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ: ಕುತೂಹಲ ಮೂಡಿಸಿದ ಭೇಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ ಅವರು ಇಂದು, ಶನಿವಾರ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪಕ್ಷೇತರ ಸಂಸದೆ ಸುಮಲತಾ ಅಂಬರೀಷ ಅವರು ಬಿಜೆಪಿ ಸೇರುತ್ತಾರೆ ಊಹಾಪೋಹ ಜೋರಾಗಿರುವಾಗಲೇ ಈ ಭೇಟಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸುಮಲತಾ ಅವರು, ಅವರು ಪದ್ಮವಿಭೂಷಣ ಪುರಸ್ಕಾರಕ್ಕೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಭೇಟಿಯಾಗಿದ್ದೆ. ಭೇಟಿ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೃಷ್ಣ ಅವರು ಮಂಡ್ಯ ಜಿಲ್ಲೆಯ ಹಿರಿಯ ನಾಯಕರು. ಅವರಿಗೆ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಬಂದಿದೆ. ನಾನು ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಈಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು..
ಬಿಜೆಪಿ ಸೇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಲಾಭ ನಷ್ಟ ನೋಡಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನನ್ನ ಜತೆ ಇರುವವರ ಬಗ್ಗೆಯೂ ವಿಚಾರ ಮಾಡಿ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಬೇಕಿದೆ ಎಂದು ಉತ್ತರಿಸಿದರು. ಮಂಡ್ಯದಿಂದ ಹಲವರು ಬಂದಿದ್ದಾರೆ. ಎಲ್ಲರ ಜತೆ ಚರ್ಚೆ ಮಾಡುತ್ತೇನೆ. ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದರು

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement