ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ವಾಂಟೆಡ್‌ ಆರೋಪಿ ಬಂಧನ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಶನಿವಾರ (ಮಾರ್ಚ್​ 4) ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತೌಫಿಲ್​ ಎಂಬಾತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈತನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ನಾಯಕ ಪ್ರವೀಣ ಅವರು 2022ರ ಜುಲೈ 26ರ ರಾತ್ರಿ ಅಂಗಡಿಗೆ ಬಾಗಿಲು ಹಾಕುತ್ತಿರುವಾಗ ಬೈಕೊಂದರಲ್ಲಿ ಮೂವರು ದುಷ್ಕರ್ಮಿಗಳು ಬಂದು ಮಾರಾಕಾಸ್ತ್ರಗಳಿಂದ ಏಕಾಏಕೆ ದಾಳಿ ಮಾಡಿ ಹತ್ಯೆ ಮಾಡಿದ್ದರು.
ಪ್ರಕರಣ ಸಂಬಂಧ ಈವರೆಗೆ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕೆಲವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಜನರಲ್ಲಿ ಭಯ ಸೃಷ್ಟಿಸುವ ಉದ್ದೇಶದಿಂದ ಪ್ರವೀಣ್‌ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ಎನ್ಐಎ ಹೇಳಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement