ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟದ ಹೊಣೆ ಹೊತ್ತ ಐಎಸ್‍ಕೆಪಿ ಉಗ್ರ ಸಂಘಟನೆ

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್‌ಕೆಪಿ ಉಗ್ರ ಸಂಘಟನೆ ಹೊತ್ತಿದೆ.
ಖೊರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ (ISKP) ಎಂಬ ಉಗ್ರ ಸಂಘಟನೆ ತನ್ನ ವಾಯ್ಸ್‌ ಆಫ್ ಖುರಾಸನ್ ನಿಯತಕಾಲಿಕೆಯಲ್ಲಿ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಕಳೆದ ಅಕ್ಟೋಬರ್‌ 23ರಂದು ಕೊಯಮತ್ತೂರಿನಲ್ಲಿ ನಡೆದ ಕಾರು ಸ್ಫೋಟ ಮತ್ತು ನವಂಬರ್‌ 19ರಂದು ಮಂಗಳೂರಿನ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಫೋಟವನ್ನು ಐಎಸ್-ಸಂಯೋಜಿತ ಉಗ್ರರು ನಡೆಸಿದ್ದರು ಎಂದು ಉಲ್ಲೇಖಿಸಿದೆ.
ತಮಿಳುನಾಡಿನ ಕೊಯಮತ್ತೂರು ಹಾಗೂ ಕರ್ನಾಟಕದ ಮಂಗಳೂರಿನಲ್ಲಿ ನಮ್ಮ ದಾಳಿಯಾಗಿದ್ದು, ಅಲ್ಲಿ ನಮ್ಮ ಸಹೋದರರು ನಮ್ಮ ಧರ್ಮದ ಗೌರವಕ್ಕಾಗಿ ಸೇಡು ತೀರಿಸಿಕೊಂಡರು ಎಂದು ಹೇಳಿದೆ. ಕೊಯಮತ್ತೂರು, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ನಡೆದ ನಮ್ಮ ದಾಳಿಗಳನ್ನು ನೀವು ಪರಿಗಣಿಸುವುದಿಲ್ಲ (ಮಂಗಳೂರು ಬದಲಿಗೆ ಬೆಂಗಳೂರು ಎಂದು ಬರೆದಿದ್ದಾರೆ)

ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿ ಮಾಡುವ ಉದ್ದೇಶದಿಂದ ಶಂಕಿತ ಉಗ್ರ ಶಾರೀಕ್ ಕುಕ್ಕರ್ ನಲ್ಲಿ ಬಾಂಬ್ ಇಟ್ಟುಕೊಂಡು ಹೋಗುತ್ತಿದ್ದ ಆದರೆ ಅದು ವಿಫಲವಾಗಿದೆ. ನಮ್ಮ ಕಾರ್ಯಾಚರಣೆಗಳನ್ನು ನಿಲ್ಲಿಸುವುದಿಲ್ಲ. ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ಣು ತಪ್ಪಿಸಿ ದಾಳಿ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದಾರೆ.
ಕಂಕನಾಡಿ ಬಳಿ ಅಚಾನಕ್ ಆಗಿ ಸ್ಫೋಟವಾಗಿ ದೊಡ್ಡ ಅನಾಹುತ ತಪ್ಪಿತ್ತು. ಇನ್ನು ತಮಿಳುನಾಡಿನ ಕೊಯಮತ್ತೂರು ಬಳಿ ಸಹ ಸ್ಫೋಟ ನಡೆಸಿತ್ತು. .
022ರ ನವೆಂಬರ್ 9ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.
ಶಂಕಿತ ಐಎಸ್ ಸಹಾನುಭೂತಿ ಹೊಂದಿರುವವರಿಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸಿದ ಎರಡು ವಾರಗಳ ನಂತರ ಇದು ಬಂದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement