ಗೋವನ್ನು ಸಂರಕ್ಷಿತ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ : ಅಲಹಾಬಾದ್ ಹೈಕೋರ್ಟ್‌

ಲಕ್ನೋ: ಗೋಹತ್ಯೆ ನಿಷೇಧಿಸಲು ಮತ್ತು ಅದನ್ನು ‘ರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಕೇಂದ್ರವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಹೇಳಿದೆ. ನಾವು ಜಾತ್ಯತೀತ ದೇಶದಲ್ಲಿ ವಾಸಿಸುತ್ತಿದ್ದೇವೆ ಮತ್ತು ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಹಿಂದೂ ಧರ್ಮದಲ್ಲಿ, ಗೋವು ದೈವಿಕ ಮತ್ತು ನೈಸರ್ಗಿಕ ಉಪಕಾರದ ಪ್ರತಿನಿಧಿಯಾಗಿದೆ ಎಂದು ನಂಬಲಾಗಿದೆ. ಆದ್ದರಿಂದ, ಅದನ್ನು … Continued

“ಕೇಂದ್ರೀ ತನಿಖಾ ಸಂಸ್ಥೆಗಳ ದುರ್ಬಳಕೆ” ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ 8 ವಿಪಕ್ಷಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ. ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ ಕೇಜ್ರಿವಾಲ್, ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ವಾಂಟೆಡ್‌ ಆರೋಪಿ ಬಂಧನ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶನಿವಾರ (ಮಾರ್ಚ್​ 4) ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತೌಫಿಲ್​ ಎಂಬಾತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈತನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. … Continued

ವಿಮಾನದಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವಿದ್ಯಾರ್ಥಿ: ವರದಿ

ನವದೆಹಲಿ; ನ್ಯೂಯಾರ್ಕ್‌ನಿಂದ ನವದೆಹಲಿಗೆ ತೆರಳುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ವರದಿಯಾಗಿದೆ. ವಿಮಾನ ಲ್ಯಾಂಡ್ ಆದ ನಂತರ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಯನ್ನು ಅಮೆರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ ಎಂದು ಐಜಿಐ ವಿಮಾನ ನಿಲ್ದಾಣದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ತಿಳಿಸಿದ್ದಾರೆ. … Continued

ಮಂಗಳೂರು – ಹುಬ್ಬಳ್ಳಿ ನಡುವೆ ವಿಮಾನಯಾನ ಸೇವೆ ಸ್ಥಗಿತ

ಮಂಗಳೂರು: ಮಂಗಳೂರು -ಹುಬ್ಬಳ್ಳಿ ವಿಮಾನಯಾನವು ಇದೇ ತಿಂಗಳು ಸ್ಥಗಿತಗೊಳ್ಳಲಿದೆ. ಏರ್‌ ಇಂಡಿಗೋ ಸಂಸ್ಥೆಯವರು ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಮಾರ್ಚ್‌ 12ರಂದು ಮಂಗಳೂರು-ಹುಬ್ಬಳ್ಳಿ ವಿಮಾನಯಾನ ಸೇವೆ ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷದ ಮೇ ತಿಂಗಳಿನಲ್ಲಿ ಮಂಗಳೂರು ಹಾಗೂ ಹುಬ್ಬಲ್ಳಿ ನಡುವೆ ವಿಮಾನಯಾನ ಆರಂಭವಾಗಿತ್ತು. ಮಂಗಳೂರು ಹಾಗೂ ಹುಬ್ಬಳ್ಳಿ ನಡುವೆ … Continued