ಎಚ್​3ಎನ್​2 ವೈರಸ್ ಸೋಂಕು ಪ್ರಕರಣ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕಳೆದ ಕೆಲವು ದಿನಗಳಿಂದ H3N2 ವೇರಿಯಂಟ್​​ನಿಂದ ದೇಶದಲ್ಲಿ ಇನ್‌ಫ್ಲ್ಯೂಂಜಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ H3N2 ಸೋಂಕಿನ ಬಗ್ಗೆ ಮಹತ್ವದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ನಿಯಂತ್ರಣ ಕ್ರಮಗಳ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿತ್ತು. ಈಗ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ … Continued

ಇಮ್ರಾನ್ ಖಾನ್ ಭಾಷಣ ಪ್ರಸಾರ ಮಾಡಿದ್ದಕ್ಕಾಗಿ ಎಆರ್‌ವೈ ನ್ಯೂಸ್ ಪ್ರಸಾರ ಬಂದ್‌ ಮಾಡಿದ ಪಾಕಿಸ್ತಾನ ಸರ್ಕಾರ..

ಇಸ್ಲಾಮಾಬಾದ್: ಭಾನುವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಡಿದ ಭಾಷಣವನ್ನು ಪ್ರಸಾರ ಮಾಡಿದ ಕಾರಣಕ್ಕೆ ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿ ARY ಟಿವಿಯನ್ನು ಪ್ರಸಾರವನ್ನು ಇಂದು, ಸೋಮವಾರ ರದ್ದುಗೊಳಿಸಲಾಗಿದೆ. ಪಾಕಿಸ್ತಾನದ ಮಾಧ್ಯಮ ನಿಯಂತ್ರಕ, ಪೇಮ್ರಾ (PEMRA) ಭಾನುವಾರ ರಾತ್ರಿ ಉಚ್ಚಾಟಿತ ಪ್ರಧಾನಿ ಭಾಷಣಗಳ ಪ್ರಸಾರವನ್ನು ನಿಷೇಧಿಸಿದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಭಾನುವಾರದಂದು ಮಾಜಿ ಪ್ರಧಾನಿ … Continued

ಯಡಿಯೂರಪ್ಪ ಕುಳಿತಿದ್ದ ಹೆಲಿಕಾಪ್ಟರ್​​​ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಹೆಲಿಪ್ಯಾಡ್‌ನಲ್ಲಿ ಇಳಿಯಲು ಅಡಚಣೆ | ವೀಕ್ಷಿಸಿ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಪೈಲಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ. ಜೇವರ್ಗಿ ಪಟ್ಟಣದ ಹೊರವಲಯದ ವಿಜಯಪುರ ರಸ್ತೆಯ ಪಕ್ಕದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‍ನಲ್ಲಿ ಈ ಘಟನೆ ನಡೆದಿದೆ. ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಯಡಿಯೂರಪ್ಪ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಯಡಿಯೂರಪ್ಪ ಅವರಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ … Continued

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಶಾರಿಕ್‌ನನ್ನು ಮಾರ್ಚ್‌ 15ರ ವರೆಗೆ ಎನ್‌ಐಎ ಕಸ್ಟಡಿಗೆ ನೀಡಿದ ವಿಶೇಷ ಕೋರ್ಟ್‌

ಬೆಂಗಳೂರು: ಕಳೆದ ವರ್ಷ ನವೆಂಬರ್‌ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆದ ಆಟೋ ರಿಕ್ಷದಲ್ಲಿ ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಶಾರಿಕ್‌ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದು, ಆತನನ್ನು ಇಂದು, ಸೋಮವಾರ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನನ್ನು ಮಾರ್ಚ್‌ 15ರ ವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿದೆ. ರಾಷ್ಟ್ರೀಯ ತನಿಖಾ … Continued

ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕೆದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಐದು ದಿನಗಳ ಹಿಂದೆ ಕಾಲು ನೋವು ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿ ವಿವಿಧ ಪರೀಕ್ಷೆಗಳನ್ನು ಮಾಡಿದ … Continued

ಬಿಜೆಪಿ ಶಾಸಕಾಂಗ ಸಭೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಹುದ್ದೆಗೆ ಮಾಣಿಕ್‌ ಸಹಾ ಪುನರಾಯ್ಕೆ

ತ್ರಿಪುರಾ: ಮಾಣಿಕ್ ಸಹಾ ತ್ರಿಪುರಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇಂದು, ಸೋಮವಾರ ಸಂಜೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡಲಾಯಿತು. 60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಐಪಿಎಫ್ಟಿ (IPFT) 33 ಸ್ಥಾನಗಳನ್ನು ಗೆಲ್ಲುವ ಮೂಲಕ ತ್ರಿಪುರಾದಲ್ಲಿ ಅಧಿಕಾರಕ್ಕೆ ಮರಳಿತು. ಮುಖ್ಯಮಂತ್ರಿ ಮತ್ತು ನೂತನ ಸಚಿವ ಸಂಪುಟದ ಪ್ರಮಾಣ … Continued

ಐವರು ಮಕ್ಕಳಿದ್ದರೂ ತನ್ನ 1.5 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ವಯೋವೃದ್ಧ…!

ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ 85 ವರ್ಷದ ವ್ಯಕ್ತಿಯೊಬ್ಬರು 1.5 ಕೋಟಿ ರೂ.ಗಳ ಮೌಲ್ಯದ ಆಸ್ತಿಯನ್ನು ದಾನವಾಗಿ ನೀಡಿದ್ದಾರೆ. ತಮ್ಮ ಮಕ್ಕಳು ತಮ್ಮನ್ನು ನೋಡಿಕೊಳ್ಳುವುದಿಲ್ಲ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಮುಜಾಫರ್‌ನಗರದ ನಾಥು ಸಿಂಗ್ ಎಂಬವರು ಮನನೊಂದು ಮನೆ ಮತ್ತು ಜಮೀನನ್ನು ಸರ್ಕಾರಕ್ಕೆ ವಿಲ್‌ ಮಾಡಿದ್ದಾರೆ. ಅಧ್ಯಯನಕ್ಕಾಗಿ ವೈದ್ಯಕೀಯ ಕಾಲೇಜಿಗೆ ದೇಹವನ್ನು ದಾನ ಮಾಡಿದ್ದಾರೆ. … Continued

ಮಂಗಗಳ ದಾಳಿಗೆ 70 ವರ್ಷದ ಮಹಿಳೆ ಸಾವು

ಹೈದರಾಬಾದ್: ತೆಲಂಗಾಣದಲ್ಲಿ 20ಕ್ಕೂ ಹೆಚ್ಚು ಕೋತಿಗಳ ಪಡೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಗಳ ದಾಳಿಗೆ ಒಳಗಾಗಿ ಮೃತಪಟ್ಟ ವೃದ್ಧೆಯನ್ನು ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಗ್ರಾಮದ 70 ವರ್ಷದ ಚಟರಬೋಯಿನಾ ನರಸವ್ವ ಎಂದು ಗುರುತಿಸಲಾಗಿದೆ. ವೃದ್ಧೆ ಶುಕ್ರವಾರ ತನ್ನ ಮನೆಯಲ್ಲಿ ಪಾತ್ರೆಗಳನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ವೇಳೆ ಕಿರಿಯ ಮಗಳು … Continued

ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಬಂಧನದ ನಂತರ ಒಂದು ವಾರದಿಂದ ಸಿಬಿಐ ಕಸ್ಟಡಿಯಲ್ಲಿದ್ದರು. ನ್ಯಾಐಾಂಗ ಬಂಧನದ ಹಿನ್ನೆಲೆಯಲ್ಲಿ ಮಾರ್ಚ್ 20 ರವರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ. ಈಗ ರದ್ದಾದ … Continued

2014-15ರ ನಂತರ ಎರಡುಪಟ್ಟು ಹೆಚ್ಚಾದ ಭಾರತದ ತಲಾ ಆದಾಯ : ಆದರೆ….

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದ 2014-15ರ ಭಾರತದ ತಲಾ ಆದಾಯವು 1,72,000 ರೂ.ಗಳಿಗೆ ದ್ವಿಗುಣಗೊಂಡಿದೆ. ಆದರೆ ಆದಾಯದ ಅಸಮಾನ ಹಂಚಿಕೆಯು ಸವಾಲಾಗಿಯೇ ಉಳಿದಿದೆ ಎಂದು ವರದಿಯೊಂದು ಹೇಳಿದೆ. ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (NSO) ಪ್ರಕಾರ, ಪ್ರಸ್ತುತ ಬೆಲೆಗಳಲ್ಲಿ ವಾರ್ಷಿಕ ತಲಾ (ನಿವ್ವಳ ರಾಷ್ಟ್ರೀಯ ಆದಾಯ) 2022-23 ರಲ್ಲಿ 1,72,000 ರೂ.ಗಳು … Continued