ಬಿಜೆಪಿ ಶಾಸಕಾಂಗ ಸಭೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಹುದ್ದೆಗೆ ಮಾಣಿಕ್‌ ಸಹಾ ಪುನರಾಯ್ಕೆ

ತ್ರಿಪುರಾ: ಮಾಣಿಕ್ ಸಹಾ ತ್ರಿಪುರಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇಂದು, ಸೋಮವಾರ ಸಂಜೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡಲಾಯಿತು.
60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಐಪಿಎಫ್ಟಿ (IPFT) 33 ಸ್ಥಾನಗಳನ್ನು ಗೆಲ್ಲುವ ಮೂಲಕ ತ್ರಿಪುರಾದಲ್ಲಿ ಅಧಿಕಾರಕ್ಕೆ ಮರಳಿತು.
ಮುಖ್ಯಮಂತ್ರಿ ಮತ್ತು ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬುಧವಾರ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಹುದ್ದೆಗೆ ಸಹಾ ಅವರು ಮುಂಚೂಣಿಯಲ್ಲಿದ್ದರೂ, ರಾಜ್ಯ ಪಕ್ಷದಲ್ಲಿ ಒಂದು ವಿಭಾಗವು ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್‌ ಅವರನ್ನು ಮುಖ್ಯಮಂತ್ರಿ ಮಾಡುವ ಇಚ್ಛೆ ವ್ಯಕ್ತಪಡಿಸಿತ್ತು ಎಂದು ಮೂಲಗಳು ಸೂಚಿಸಿವೆ.
ಬಿಜೆಪಿ ಮತ್ತು ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಸಮ್ಮಿಶ್ರವು ಎರಡನೇ ಬಾರಿಗೆ ಅಧಿಕಾರಕ್ಕೆ ಮರಳಿದರೂ, 2018 ರಲ್ಲಿ 36 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಹಾಗೂ ಎಂಟ ಸ್ಥಾನಗಳಿಸಿದ್ದ ಐಪಿಎಫ್‌ಟಿ ಇದಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿವೆ.
ಟೌನ್ ಬರ್ದೋವಾಲಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದಿರುವ ಮಾಣಿಕ್ ಸಹಾ, ತ್ರಿಪುರಾದಲ್ಲಿ ಪಕ್ಷದ ಸಾಧನೆ ನಿರೀಕ್ಷಿತ ಮಟ್ಟದಲ್ಲಿದೆ ಎಂದು ಹೇಳಿದ್ದಾರೆ. “ಬಿಜೆಪಿಯ ಗೆಲುವನ್ನು ನಿರೀಕ್ಷಿಸಲಾಗಿತ್ತು… ನಾವು ಅದಕ್ಕಾಗಿ ಕಾತುರದಿಂದ ಕಾಯುತ್ತಿದ್ದೆವು. ಈಗ ನಮ್ಮ ಜವಾಬ್ದಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಮಾಣಿಕ್ ಸಹಾ, ದಂತ ಶಸ್ತ್ರಚಿಕಿತ್ಸಕರು, ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಿಂದ ಪದವಿ ಪಡೆದಿದ್ದಾರೆ
ಅವರು 2016 ರಲ್ಲಿ ಬಿಜೆಪಿ ಸೇರುವ ಮೊದಲು ಕಾಂಗ್ರೆಸ್ ಸದಸ್ಯರಾಗಿದ್ದರು. ಸಹಾ ಅವರು 2020 ರಿಂದ 2022 ರವರೆಗೆ ಶಾಸಕರಾಗಿ ಆಯ್ಕೆಯಾದಾಗ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ಕಳೆದ ವರ್ಷ ಏಪ್ರಿಲ್ 3 ರಿಂದ ಜುಲೈ 4 ರವರೆಗೆ ಅವರು ರಾಜ್ಯಸಭೆಯ ಸದಸ್ಯರಾಗಿ ಅಲ್ಪಾವಧಿ ಕೆಲಸ ಮಾಡಿದರು.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement