ಮಂಗಗಳ ದಾಳಿಗೆ 70 ವರ್ಷದ ಮಹಿಳೆ ಸಾವು

ಹೈದರಾಬಾದ್: ತೆಲಂಗಾಣದಲ್ಲಿ 20ಕ್ಕೂ ಹೆಚ್ಚು ಕೋತಿಗಳ ಪಡೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮಂಗಗಳ ದಾಳಿಗೆ ಒಳಗಾಗಿ ಮೃತಪಟ್ಟ ವೃದ್ಧೆಯನ್ನು ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಗ್ರಾಮದ 70 ವರ್ಷದ ಚಟರಬೋಯಿನಾ ನರಸವ್ವ ಎಂದು ಗುರುತಿಸಲಾಗಿದೆ.
ವೃದ್ಧೆ ಶುಕ್ರವಾರ ತನ್ನ ಮನೆಯಲ್ಲಿ ಪಾತ್ರೆಗಳನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ವೇಳೆ ಕಿರಿಯ ಮಗಳು ಸುಗುಣ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದರಿಂದ ವೃದ್ಧೆ ಮನೆಯಲ್ಲಿ ಒಬ್ಬರೇ ಇದ್ದರು ಎಂದು ಸ್ಥಳೀಯ ವರದಿಗಳು ತಿಳಿಸಿವೆ. ನರಸವ್ವ ಸಹಾಯಕ್ಕಾಗಿ ಕೂಗಿಕೊಂಡರೂ, ಭಯಭೀತರಾದ ನೆರೆಹೊರೆಯವರು ಅವಳನ್ನು ರಕ್ಷಿಸಲು ಯಾವುದೇ ಪ್ರಯತ್ನ ಮಾಡಲಿಲ್ಲ. ಮಂಗಗಳು ಓಡಿಹೋಗುವವರೆಗೂ ನೆರೆಹೊರೆಯವರು ತಮ್ಮ ಮನೆಗ ಬಾಗಿಲನ್ನು ಮುಚ್ಚಿಕೊಂಡರು ಎಂದು ಹೇಳಲಾಗಿದೆ.
ಮಂಗಗಳು ವೃದ್ಧೆಯ ಎದೆ, ಬೆನ್ನು ಮತ್ತು ಕೈಕಾಲುಗಳಿಗೆ ಗಂಭೀರವಾಗಿ ಗಾಯಗೊಳಿಸಿವೆ. ಸ್ವಲ್ಪ ಸಮಯದ ನಂತರ ಸುಗುಣ ಮನೆಗೆ ಮರಳಿದ ನಂತರವೇ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರಸವ್ವ ಶನಿವಾರ ಮೃತಪಟ್ಟಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ನನ್ನ ಹೆಸರು ಸಾವರ್ಕರ್ ಅಲ್ಲ...ನಾನು ಗಾಂಧಿ, ಕ್ಷಮೆ ಕೇಳೋಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement