ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಬಂಧನದ ನಂತರ ಒಂದು ವಾರದಿಂದ ಸಿಬಿಐ ಕಸ್ಟಡಿಯಲ್ಲಿದ್ದರು. ನ್ಯಾಐಾಂಗ ಬಂಧನದ ಹಿನ್ನೆಲೆಯಲ್ಲಿ ಮಾರ್ಚ್ 20 ರವರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ.
ಈಗ ರದ್ದಾದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
ವಿಚಾರಣೆಯ ಸಂದರ್ಭದಲ್ಲಿ, ಸಿಬಿಐ ನ್ಯಾಯಾಲಯಕ್ಕೆ ಸಂಸ್ಥೆಯು ಹೆಚ್ಚಿನ ಕಸ್ಟಡಿಯನ್ನು ಕೋರುತ್ತಿಲ್ಲ, ಭವಿಷ್ಯದಲ್ಲಿ ಬೇಕಾದಾಗ ಕೋರುತ್ತೇವೆ ಎಂದು ತಿಳಿಸಿದರು. ಆದರೆ “ಆರೋಪಿಯ ನಡವಳಿಕೆ ಸರಿಯಾಗಿಲ್ಲ” ಎಂದು ಹೇಳಿದರು. ಅವರು ಸಾಕ್ಷಿಗಳನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ವಿಚಾರಣೆಗೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ” ಎಂದು ಸಿಬಿಐ ನ್ಯಾಯಾಲಯಕ್ಕೆ ಹೇಳಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಡೀ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನನಗೆ ಒಂದೇ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಇದರಿಂದ ನನಗೆ ಮಾನಸಿಕ ಕಿರುಕುಳವಾಗಿದೆ” ಎಂದು ಸಿಸೋಡಿಯಾ ಅವರ ಸಿಬಿಐ ಬಂಧನವನ್ನು ಶನಿವಾರ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದ ಕೂಡಲೇ ಕೋರ್ಟ್‌ಗೆ ತಿಳಿಸಿದ್ದರು. ನ್ಯಾಯಾಲಯವು ಈ ಹಿಂದೆ ಅನುಮತಿಸಿದ್ದ 7 ದಿನಗಳ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು, ಸೋಮವಾರ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ ಅವರ ಮುಂದೆ ಹಾಜರುಪಡಿಸಲಾಯಿತು.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದ್ದರಿಂದ ಮತ್ತು ಸಾಕ್ಷ್ಯಾಧಾರಗಳೊಂದಿಗೆ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.
ಏತನ್ಮಧ್ಯೆ, ಸಿಸೋಡಿಯಾ ಅವರು ದೆಹಲಿ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ, ಮಾರ್ಚ್ 10 ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುತ್ತದೆ. ನ್ಯಾಯಾಲಯವು ತನ್ನ ಉತ್ತರವನ್ನು ಸಲ್ಲಿಸಲು ಸಿಬಿಐಗೆ ಕೇಳಿದೆ.

ಇಂದಿನ ಪ್ರಮುಖ ಸುದ್ದಿ :-   ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಭಾರತದ ನೀತು ಘಂಘಾಸ್, ಸವೀಟಿ ಬೂರಾ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement