ಹೈದರಾಬಾದಿನಲ್ಲಿ ಸಿನೆಮಾ ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್‌ ಗೆ ಗಂಭೀರ ಗಾಯ

ಮುಂಬೈ : ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಅವರು ತಮ್ಮ ಮುಂಬರುವ ಚಿತ್ರ ಪ್ರಾಜೆಕ್ಟ್ ಕೆ ಶೂಟಿಂಗ್‌ ವೇಳೆ ಹೈದರಾಬಾದ್‌ನಲ್ಲಿ ಗಾಯಗೊಂಡಿದ್ದಾರೆ.
ಅಮಿತಾಬ್ ಬಚ್ಚನ್ ತಮ್ಮ ಬ್ಲಾಗ್‌ನಲ್ಲಿ ತಮ್ಮ ಆರೋಗ್ಯದ ನವೀಕರಣವನ್ನು ಹಂಚಿಕೊಂಡಿದ್ದಾರೆ. ಸದ್ಯ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ. ಚಿತ್ರದ ಆಕ್ಷನ್ ಸೀಕ್ವೆನ್ಸ್ ವೇಳೆ ಬಿಗ್ ಬಿ ಗಾಯಗೊಂಡಿದ್ದಾರೆ. ದುರದೃಷ್ಟವಶಾತ್ ಅವರ ಬಲ ಪಕ್ಕೆಲುಬಿನ ಸ್ನಾಯು ಹರಿದುಹೋಗಿದು.
ಗಾಯದಿಂದ ಚೇತರಿಸಿಕೊಳ್ಳಲು ವಾರಗಳು ಬೇಕಾಗುವುದರಿಂದ ಚಿತ್ರದ ಶೂಟಿಂಗ್ ಅನ್ನು ರದ್ದುಗೊಳಿಸಬೇಕಾಯಿತು ಎಂದು ನಟ ತಮ್ಮ ಬ್ಲಾಗ್‌ನಲ್ಲಿ ಉಲ್ಲೇಖಿಸಿದ್ದಾರೆ. ಅಮಿತಾಬ್ ಬಚ್ಚನ್ ಮನೆಗೆ ಹಿಂದಿರುಗುವ ಮೊದಲು ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್‌ಗೆ ಒಳಗಾಗಿದ್ದರು. ಸದ್ಯಕ್ಕೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

“ಹೈದರಾಬಾದ್‌ನಲ್ಲಿ ಪ್ರಾಜೆಕ್ಟ್ ಕೆ ಚಿತ್ರೀಕರಣದಲ್ಲಿ, ಆಕ್ಷನ್ ಶಾಟ್ ಸಮಯದಲ್ಲಿ, ನನಗೆ ಗಾಯವಾಗಿದೆ. ಹೈದರಾಬಾದ್‌ನ ಎಐಜಿ (AIG) ಆಸ್ಪತ್ರೆಯಲ್ಲಿ ಸಿ.ಟಿ.(CT) ಸ್ಕ್ಯಾನ್ ಮಾಡಿಸಿದ್ದೇನೆ. ಮನೆಗೆ ಮರಳಿದ್ದೇನೆ. ನೋವಿಗೆ ಕೆಲವು ಔಷಧೋಪಚಾರವೂ ಇದೆ.
ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ವಾಸಿಯಾಗುವವರೆಗೂ ರದ್ದುಗೊಳಿಸಲಾಗಿದೆ ಎಂದು ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ.
ಪ್ರಾಜೆಕ್ಟ್ ಕೆ ಸಿನೆಮಾ ಒಂದು ಫ್ಯಾಂಟಸಿ ಡ್ರಾಮಾ ಆಗಿದ್ದು, ಅಶ್ವಿನಿ ದತ್ ಅವರ ಸಿನೆಮಾ ಆಗಿದೆ. ಪ್ರಭಾಸ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಬಾಲಿವುಡ್ ಲೆಜೆಂಡ್ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಪ್ರಾಜೆಕ್ಟ್ ಕೆ 2024 ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.

ಇಂದಿನ ಪ್ರಮುಖ ಸುದ್ದಿ :-   ಕೇಂದ್ರ ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement