ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕೆದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ಐದು ದಿನಗಳ ಹಿಂದೆ ಕಾಲು ನೋವು ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿ ವಿವಿಧ ಪರೀಕ್ಷೆಗಳನ್ನು ಮಾಡಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ದಿನವೇ ಟ್ವೀಟ್ ಮಾಡಿದ ದೇವೇಗೌಡರು, ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement