ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಶಾರಿಕ್‌ನನ್ನು ಮಾರ್ಚ್‌ 15ರ ವರೆಗೆ ಎನ್‌ಐಎ ಕಸ್ಟಡಿಗೆ ನೀಡಿದ ವಿಶೇಷ ಕೋರ್ಟ್‌

ಬೆಂಗಳೂರು: ಕಳೆದ ವರ್ಷ ನವೆಂಬರ್‌ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆದ ಆಟೋ ರಿಕ್ಷದಲ್ಲಿ ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಶಾರಿಕ್‌ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದು, ಆತನನ್ನು ಇಂದು, ಸೋಮವಾರ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನ್ಯಾಯಾಲಯವು ಈತನನ್ನು ಮಾರ್ಚ್‌ 15ರ ವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿದೆ. ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯದ ಮುಂದೆ ಸೋಮವಾರ ಈತನನ್ನು ಹಾಜರುಪಡಿಸಲಾಯಿತು. ಕೋರ್ಟ್‌ ಆದೇಶದ ಬಳಿಕ ಎನ್‌ಐಎ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಒಯ್ಯುತ್ತಿದ್ದಾಗ ಅದು ಸ್ಫೋಟಗೊಂಡು ಶಾರೀಕ್‌ ಸುಟ್ಟು ಗಂಬೀರವಾಗಿ ಗಾಯಗೊಂಡಿದ್ದ. ನಂತರ ಆತನನ್ನುಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ, ಪ್ರಮುಖ ಸಾಕ್ಷಿಯಾಗಿರುವಆತನಿಗೆ ಭದ್ರತೆಯೊಂದಿಗೆ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊಯಮತ್ತೂರು ಮತ್ತು ಮಂಗಳೂರಿನಲ್ಲಿ ನಡೆದ ಸ್ಫೋಟಗಳ ಹೊಣೆಯನ್ನು ಖೊರಾಸಾನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ (ಐಎಸ್‌ಕೆಪಿ) ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement