ಒಂದು ದಶಕದ ಕಾರ್ಯಾಚರಣೆಯ ನಂತರ ಕಾರ್ಯಾಚರಣೆ ನಿಲ್ಲಿಸಿದ ಉಪಗ್ರಹವನ್ನು ಯಶಸ್ವಿಯಾಗಿ ಡಿ-ಆರ್ಬಿಟ್ ಮಾಡಿದ ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಂಗಳವಾರ ತನ್ನ ಕಾರ್ಯಾಚರಣೆ ನಿಲ್ಲಿಸಿದ ಉಪಗ್ರಹವನ್ನು ಯಶಸ್ವಿಯಾಗಿ ಡಿ-ಆರ್ಬಿಟ್ (ಪರಿಭ್ರಮಿಸಿದ ಕ್ಷಕೆಯಿಂದ ಕೆಳಕ್ಕೆ ಇಳಿಸಬೇಕು) ಮಾಡಿದೆ. ಮೇಘಾ ಟ್ರೋಪಿಕ್ಸ್-1 ಅನ್ನು ಪೆಸಿಫಿಕ್ ಮಹಾಸಾಗರದ ಮೇಲಿರುವ ಆಕಾಶದಲ್ಲಿ ವಿಘಟಿಸಿದ ನಂತರ ಸುಟ್ಟುಹೋದ ಕಾರಣ ಅದರ ಕಕ್ಷೆಯಿಂದ ಕೆಳಕ್ಕೆ ತರಲಾಯಿತು. ಇಸ್ರೋ ಈ ಬಗ್ಗೆ ಟ್ವೀಟ್ ಮಾಡಿದ್ದು, “ಕಾರ್ಯಾಚರಣೆ ಮುಕ್ತಾಯಗೊಂಡ ಮೇಘಾ-ಟ್ರೋಪಿಕ್ಸ್-1 … Continued

ಮಹಿಳಾ ದಿಚರಣೆ : ನಾಳೆ ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬುಧವಾರ (ಮಾರ್ಚ್‌ 8) ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರ ಉಚಿತವಾಗಿ ಪ್ರಯಾಣಿಸಬಹುದು. ಇಂದು ಮಂಗಳವಾರ (ಮಾರ್ಚ್‌ 7) ಮಧ್ಯರಾತ್ರಿ 12 ಗಂಟೆಯಿಂದ ಬುಧವಾರ (ಮಾರ್ಚ್‌ 8) ಮಧ್ಯರಾತ್ರಿ 12 ಗಂಟೆ ರವರೆಗೆ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಿಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.ವಜ್ರ, ವಾಯುವಜ್ರ ಸೇರಿ ಎಲ್ಲ ಬಸ್‌’ಗಳಲ್ಲೂ … Continued

ಢಾಕಾದಲ್ಲಿ ಸ್ಫೋಟ : 14 ಮಂದಿ ಸಾವು, 100 ಮಂದಿಗೆ ಗಾಯ

ಢಾಕಾ: ಬಾಂಗ್ಲಾದೇಶದ ರಾಜಧಾನಿಯಲ್ಲಿ ಏಳು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಜನರು ಮೃತಪಟ್ಟಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು, ಮಂಗಳವಾರ ಸಂಜೆ 4:50 ಗಂಟೆಗೆ (ಸ್ಥಳೀಯ ಕಾಲಮಾನ) ಸಂಭವಿಸಿದ ಸ್ಫೋಟದ ನಂತರ ಹಲವಾರು ಅಗ್ನಿಶಾಮಕ ಘಟಕಗಳು ಸ್ಥಳಕ್ಕೆ ಧಾವಿಸಿದವು, ಅಗ್ನಿಶಾಮಕ ಸೇವೆಯ ನಿಯಂತ್ರಣ … Continued

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಭೂಕುಸಿತ : 1 ಸಾವು, 6 ಮಂದಿಗೆ ಗಾಯ | ದೃಶ್ಯ ವೀಡಿಯೊದಲ್ಲಿ ಸೆರೆ

ಬನಿಹಾಲ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಮಬಾನ್ ಜಿಲ್ಲೆಯಲ್ಲಿ ಮಂಗಳವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಯಕಟ್ಟಿನ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ (ರಾಂಬನ್) ಮೋಹಿತಾ ಶರ್ಮಾ … Continued

ಮುಲ್ಕಿ : ಟ್ಯಾಂಕರ್ -ಸ್ಕೂಟರ್‌ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು

posted in: ರಾಜ್ಯ | 0

ಮಂಗಳೂರು : ಸ್ಕೂಟರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಗಂಡ ಹೆಂಡತಿ ಇಬ್ಬರೂ ಮೃತಪಟ್ಟ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲುಗುಡ್ಡೆ ನಿವಾಸಿಗಳಾದ ಅಕ್ಬರ್ ಭಾಷಾ (61) ಹಾಗೂ ಖತೀಜಾ ಬಿ (46) ಎಂದು ಗುರುತಿಸಲಾಗಿದೆ. ಪಾಸ್ ಪೋರ್ಟ್ ಮಾಡಿಸಲೆಂದು … Continued

ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಮಾಡಾಳು ಶಾಸಕ ವಿರೂಪಾಕ್ಷಪ್ಪ ಸಾರ್ವಜನಿಕರ ಮುಂದೆ ಪ್ರತ್ಯಕ್ಷ

posted in: ರಾಜ್ಯ | 0

ದಾವಣಗೆರೆ : ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ದಾವಣಗೆರೆಯ  ಚನ್ನೇಶಪುರದ ತಮ್ಮ ನಿವಾಸದ ಬಳಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದಾರೆ. ಆರು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಅವರು ತಮ್ಮೂರು ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ನಂತರ ವಿರೂಪಾಕ್ಷಪ್ಪ … Continued

ಉದ್ಯೋಗಕ್ಕಾಗಿ ಭೂ ಹಗರಣ: ಪತ್ನಿ ರಾಬ್ರಿ ದೇವಿ ವಿಚಾರಣೆ ಮರುದಿನ ಆರ್‌ಜೆಡಿ ಮುಖ್ಯಸ್ಥ ಲಾಲು ಅವರನ್ನು ಪ್ರಶ್ನಿಸಿದ ಸಿಬಿಐ

ನವದೆಹಲಿ: ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಮಾಜಿ ರೈಲ್ವೆ ಸಚಿವ ಲಾಲುಪ್ರಸಾದ ಯಾದವ್ ಅವರ ವಿಚಾರಣೆ ಆರಂಭಿಸಿದೆ. ಇದೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿದ ಒಂದು ದಿನದ ನಂತರ ಸಿಬಿಐ ಲಾಲು ಅವರನ್ನು ವಿಚಾರಣೆ ನಡೆಸುತ್ತಿದೆ. ಯಾದವ ದಂಪತಿ … Continued

ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಲಂಚ ಪ್ರಕರಣದಲ್ಲಿ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್   ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಹಾಗೂ 48 ಗಂಟೆಯಲ್ಲಿ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ … Continued

ಶಿವಮೊಗ್ಗ: ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

posted in: ರಾಜ್ಯ | 0

ಶಿವಮೊಗ್ಗ : ಕಿಡಿಗೇಡಿಗಳು ದೇವಸ್ಥಾನವೊಂದರ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾರ್ಚ್‌ 4ರಂದು ಸಂಜೆ 4 … Continued

ರಾಜ್ಯದಲ್ಲಿ ಹೆಚ್ಚಾದ ಬಿಸಿಗಾಳಿ : ಆರೋಗ್ಯ ಇಲಾಖೆಯಿಂದ `ಮಾರ್ಗಸೂಚಿ’ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಸಿಗಾಳಿ ಹೆಚ್ಚಾಗಿದ್ದು, ಬೇಸಿಗೆಕಾಲದ ಬಿಸಿಗಾಳಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿ ಅಧಿಕ ಉಷ್ಣಾಂಶವಿರುವ ಸಾಧ್ಯತೆ ಇದ್ದು, ಹೀಗಾಗಿ ಅನೇಕ ರೀತಿಯ ಅನಾರೋಗ್ಯ ಸಮಸ್ಯೆ ಎದುರಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುಬೇಕು ಎಂದು ಗೈಡ್‌ಲೈನ್ಸ್‌ ಹೇಳಿದೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಯ ಪ್ರಕಾರ, … Continued