ಮಹಿಳಾ ದಿಚರಣೆ : ನಾಳೆ ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬುಧವಾರ (ಮಾರ್ಚ್‌ 8) ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರ ಉಚಿತವಾಗಿ ಪ್ರಯಾಣಿಸಬಹುದು.
ಇಂದು ಮಂಗಳವಾರ (ಮಾರ್ಚ್‌ 7) ಮಧ್ಯರಾತ್ರಿ 12 ಗಂಟೆಯಿಂದ ಬುಧವಾರ (ಮಾರ್ಚ್‌ 8) ಮಧ್ಯರಾತ್ರಿ 12 ಗಂಟೆ ರವರೆಗೆ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಿಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.ವಜ್ರ, ವಾಯುವಜ್ರ ಸೇರಿ ಎಲ್ಲ ಬಸ್‌’ಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಪತ್ರ ಬರೆದಿದ್ದರು. ಈ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿ ನೀಡಿದ್ದಾರೆ.

ಬಿಎಂಟಿಸಿ 48 ಘಟಕಗಳು, 50 ಬಸ್‌ ನಿಲ್ದಾಣಗಳು, 6,600 ಬಸ್‌ಗಳನ್ನು ಹೊಂದಿದ್ದು, ಪ್ರತಿನಿತ್ಯ 54 ಸಾವಿರ ಕಾರ್ಯಾಚರಣೆ ಮಾಡುತ್ತದೆ. ಪ್ರತಿದಿನ ಸರಾಸರಿ 29 ಲಕ್ಷ ಪ್ರಯಾಣಿಕರು ನಿತ್ಯ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ಮಹಿಳೆಯರಿಗೆ ಸುರಕ್ಷಿತ ಮತ್ತು ಸಾರಿಗೆ ಸೌಲಭ್ಯ ಒದಗಿಸುವುದು ಹಾಗೂ ಮಹಿಳೆಯರು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ಉಪಯೋಗಿಸುವುದರಿಂದ ಸಾರ್ವಜನಿಕ ಸಾರಿಗೆ ಉತ್ತೇಜಿಸಿದಂತಾಗಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement