ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಲಂಚ ಪ್ರಕರಣದಲ್ಲಿ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್   ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಹಾಗೂ 48 ಗಂಟೆಯಲ್ಲಿ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.
ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲರು ವಾದ ಮಂಡಿಸಿ ವಯಸ್ಸು ಆರೋಗ್ಯದ ಕಾರಣದ ಮೇಲೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಎಂದು ಅವರು ಮನವಿ ಮಾಡಿದರು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ತನಿಖಾಧಿಕಾರಿಗಳ ಮುಂದೆ ಶಾಸಕರು ಹಾಜರಾಗಬೇಕು ಎಂದು ಸೂಚನೆ ನೀಡಿದರು. ಅಲ್ಲದೆ, ಮುಂದಿನ ಆದೇಶದವರೆಗೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಕಚೇರಿಗೆ ಪ್ರವೇಶಿಸದಂತೆ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಲಯ ಸೂಚಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅರ್ಜಿಯ ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಪೀಠದ ಮುಂದೆ ಆಕ್ಷೇಪಣೆ ಸಲ್ಲಿಕೆ ಮಾಡಲು ಕಾಲಾವಕಾಶ ನೀಡುವಂತೆ ಲೋಕಾಯುಕ್ತರ ಪರ ವಕೀಲರು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಮೂರ್ತಿಗಳು 5 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದರು. ಅಲ್ಲದೇ 48 ಗಂಟೆಯಲ್ಲಿ ಶಾಸಕರು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದರು. ಮನವಿಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ಸೂಚಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಾರ್ಚ್ 17 ಕ್ಕೆ ಮುಂದೂಡಿದೆ.
ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ ವಿರುದ್ಧ ಕೇಸು ದಾಖಲಾಗಿತ್ತು. ಅರ್ಜಿದಾರರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 7(ಎ) ಮತ್ತು (ಬಿ), 7(ಎ) 8, 9 ಮತ್ತು 10 ರ ಅಡಿಯಲ್ಲಿ ಅಪರಾಧಗಳಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement