ಮುಲ್ಕಿ : ಟ್ಯಾಂಕರ್ -ಸ್ಕೂಟರ್‌ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು : ಸ್ಕೂಟರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಗಂಡ ಹೆಂಡತಿ ಇಬ್ಬರೂ ಮೃತಪಟ್ಟ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ತೀರ್ಥಹಳ್ಳಿ ಕೋಳಿಕಾಲುಗುಡ್ಡೆ ನಿವಾಸಿಗಳಾದ ಅಕ್ಬರ್ ಭಾಷಾ (61) ಹಾಗೂ ಖತೀಜಾ ಬಿ (46) ಎಂದು ಗುರುತಿಸಲಾಗಿದೆ. ಪಾಸ್ ಪೋರ್ಟ್ ಮಾಡಿಸಲೆಂದು ಮೃತ ದಂಪತಿ ತೀರ್ಥಹಳ್ಳಿಯಿಂದ ಮಂಗಳೂರಿನ ಪಾಸ್ಪೋರ್ಟ್ ಕಚೇರಿಗೆ ಮುಂಜಾನೆ ಸ್ಕೂಟರಿನಲ್ಲಿ ಹೊರಟ್ಟಿದ್ದರು. ಮುಲ್ಕಿಯ ಬಪ್ಪನಾಡು ಸೇತುವೆ ಬಳಿ ಇವರ ಸ್ಕೂಟರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ದಂಪತಿ ರಸ್ತೆಗೆ ಎಸೆಯಲ್ಪಟ್ಟಿದ್ದು ಅವರ ಮೇಲೆ ಲಾರಿಯ ಚಕ್ರ ಚಲಿಸಿದ್ದರಿಂದ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿದ್ದಾರೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement