ರಾಜ್ಯದಲ್ಲಿ ಹೆಚ್ಚಾದ ಬಿಸಿಗಾಳಿ : ಆರೋಗ್ಯ ಇಲಾಖೆಯಿಂದ `ಮಾರ್ಗಸೂಚಿ’ ಬಿಡುಗಡೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಸಿಗಾಳಿ ಹೆಚ್ಚಾಗಿದ್ದು, ಬೇಸಿಗೆಕಾಲದ ಬಿಸಿಗಾಳಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.
ಈ ಬಾರಿ ಅಧಿಕ ಉಷ್ಣಾಂಶವಿರುವ ಸಾಧ್ಯತೆ ಇದ್ದು, ಹೀಗಾಗಿ ಅನೇಕ ರೀತಿಯ ಅನಾರೋಗ್ಯ ಸಮಸ್ಯೆ ಎದುರಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುಬೇಕು ಎಂದು ಗೈಡ್‌ಲೈನ್ಸ್‌ ಹೇಳಿದೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಯ ಪ್ರಕಾರ, ನವಜಾತ ಶಿಶುಗಳು, ಪುಟ್ಟ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ಮಾಡುವವರು, ಮಾನಸಿಕ ಸಮಸ್ಯೆಗಳಿರುವವರು, ಹಾಗೂ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆ ವಹಿಸಬೇಕು.
ಸಾರ್ವಜನಿಕರು ಏನು ಮಾಡಬೇಕು?
* ಉಷ್ಣಗಾಳಿಯಿಂದ ರಕ್ಷಿಸಿಕೊಳ್ಳಲು ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯಬೇಕು. ಪ್ರಯಾಣದ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು.
* ನಿಂಬೆ ಹಣ್ಣಿನ ಷರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಸೇವಿಸಬೇಕು.
* ನೀರಿನ ಅಂಶ ಹೆಚ್ಚಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳೆನೀರು ಸೇವಿಸಬೇಕು.
* ಹತ್ತಿಬಟ್ಟೆ ಧರಿಸಬೇಕು. ಟೋಪಿ, ಛತ್ರಿಗಳನ್ನು ಇಟ್ಟುಕೊಳ್ಳಬೇಕು.

ಇದನ್ನು ಮಾಡಬೇಡಿ…
* ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
* ಮಧ್ಯಾಹ್ನದ ವೇಳೆ ಶ್ರಮದಾಯಕ ಹೊರಾಂಗಣ ಚಟುವಟಕೆ ಕೈಗೊಳ್ಳುವುದು ಬೇಡ. ಶ್ರಮದಾಯಕ ಹಾಗೂ ಹೊರಾಂಗಣ ಚಟುವಟಕೆಗಳನ್ನು ಬೆಳಗಿನ ಅಥವಾ ಸಂಜೆಯ ವೇಳೆ ಮಾಡಬೇಕು.
* ಚಪ್ಪಲಿ ಇಲ್ಲದೆ ಹೊರಹೋಗುವ ಅಭ್ಯಾಸ ಬಿಡಬೇಕು.
* ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಬೇಕು, ಅಡುಗೆ ಮನೆಯಲ್ಲಿ ಕಿಟಕಿ ಬಾಗಿಲುಗಳನ್ನು ತೆರೆಯಬೇಕು.
* ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರ ಇರುವುದು ಉತ್ತಮ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement