ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಈ ಬಹುಮಹಡಿ ಕಟ್ಟಡ ಕುಸಿತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು, ಬುಧವಾರ ಮಧ್ಯಾಹ್ನ ಕಟ್ಟಡ ಕುಸಿದು ಬಿದ್ದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಕುಸಿದ ಕಟ್ಟಡದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ.
ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಕಟ್ಟಡ ಕುಸಿದು ಬಿದ್ದಾಗ ಅದರೊಳಗೆ ಯಾರಾದರೂ ಇದ್ದಿದ್ದರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬುದು ಕಟ್ಟಡ ಬೀಳುವಾಗ ಜನರು ಸುರಕ್ಷತೆಗಾಗಿ ಓಡಿದ್ದಾರೆ. ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ. ಕಟ್ಟಡ ಕುಸಿದಿರುವುದನ್ನು ಕಂಡ ಜನರು ಸುತ್ತಮುತ್ತಲಿನ ಪ್ರದೇಶಗಳಿಂದ ಸ್ಥಳಾಂತರವಾದರು. ಈ ವೀಡಿಯೋ ನೋಡಿದರೆ ಇದು ಹಳೆಯ ಕಟ್ಟಡವೇನೋ ಎನಿಸುತ್ತದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಮಾಹಿತಿ ಪ್ರಕಾರ, ಈ ಕಟ್ಟಡದ ನೆಲ ಮಹಡಿಯಲ್ಲಿ ಅಂಗಡಿ ಇದೆ. ಕಟ್ಟಡ ಕುಸಿತದಿಂದ ಸಮೀಪದ ಕೆಲ ಮನೆಗಳಿಗೂ ಹಾನಿಯಾಗಿದೆ.
ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಕೆಲ ದಿನಗಳ ಹಿಂದೆ ಕಟ್ಟಡದಲ್ಲಿದ್ದವರು ಕಟ್ಟಡವನ್ನು ಖಾಲಿ ಮಾಡಿದ್ದಾರೆ ಎಂದು ದೆಹಲಿ ಮಹಾನಗರ ಪಾಲಿಕೆಯ ಶಹಂದರ್ ಉತ್ತರ ವಲಯದ ಉಪ ಆಯುಕ್ತ ಸಂಜೀವ್ ಮಿಶ್ರಾ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:05 ಕ್ಕೆ ಮಾಹಿತಿ ಬಂದಿತು. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಅವಶೇಷಗಳ ತೆರವು ಕಾರ್ಯ ನಡೆಯುತ್ತಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನ ತಂಡವು ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತಿದೆ. ಸ್ಥಳೀಯರೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.
ಕಳೆದ ಮಾರ್ಚ್ 1 ರಂದು ಉತ್ತರ ದೆಹಲಿಯ ರೋಶನಾರಾ ರಸ್ತೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಬೆಂಕಿಗೆ ಆಹುತಿಯಾಗಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಡಿಸೆಂಬರ್‌ನಲ್ಲಿ ಶಾಶ್ರೀನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು. ಕಟ್ಟಡ ಖಾಲಿ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ.
ನಿಮ್ಮ ಕಾಮೆಂಟ್ ಬರೆಯಿರಿ