ನಾಳಿನ ಕರ್ನಾಟಕ ಬಂದ್​ ವಾಪಸ್​ ಪಡೆದ ಕಾಂಗ್ರೆಸ್​

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ನಾಯಕರು ನಾಳೆ ಮಾರ್ಚ್‌ 9ರಂದು ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ಕರೆಯನ್ನು ಹೊಂಡೆದಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವುದರಿಂದ ಪರೀಕ್ಷೆಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಾಂಗ್ರೆಸ್​ ಬಂದ್‌ ರದ್ದುಗೊಳಿಸಿದೆ ಎಂದು ಹೇಳಲಾಗಿದೆ.
ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಗಳನ್ನು ಖಂಡಿಸಿ ನಾಳೆ ಗುರುವಾರ ಬೆಳಗ್ಗೆ 9 ಗಂಟೆಯಿಂದ ಎರಡು ತಾಸು ಬಂದ್​ಗೆ ಕರೆ ನೀಡಲಾಗಿತ್ತು. ಆದರೆ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅಡಚಣೆ ಉಂಟಾಗಬಾರದು ಎಂಬ ಕಾರಣಕ್ಕೆ ಬಂದ್​ ಹಿಂಪಡೆಯುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾರ್ಚ್‌ 9 ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು. ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್ ನಿಂದ ನಮಗೆ ತೊಂದರೆಯಾಗಬಹುದು ಅವರ ಹಿತ ಗಮನದಲ್ಲಿಟ್ಟು ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ ಎಂದು ಶಿವಕುಮಾರ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement