ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮುಖ್ಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಎಂದು ತಿಳಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಟ್ವೀಟ್‌ ಮಾಡಿದ್ದು ಇಂದು, ಸೋಮವಾರ ಸಂಜೆ ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿತ್ತು. ತಾತ್ಕಾಲಿಕ ಆಯ್ಕೆ ಪಟ್ಟಿಗೆ ದಿನಾಂಕ 04-03-2023ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಸಲ್ಲಿಕೆಯಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹವಾದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

15,000 ಶಾಲಾ ಶಿಕ್ಷಕರ ನೇಮಕಾತಿಗೆ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆನ್ ಲೈನ್ ಮೂಲಕ 1,16,223 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ನೇಮಕಾತಿಗೆ ದಿನಾಂಕ 21-05-2022 ಮತ್ತು 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದಂತ 68,849 ಮಂದಿಯಲ್ಲಿ ಅರ್ಹತೆಯನ್ನು 51,098 ಮಂದಿ ಪಡೆದಿದ್ದರು. 1:2 ದಾಖಲೆಗಳ ಪರಿಶೀಲನೆ ನಡೆಸಿದಾಗ 22,432 ಮಂದಿ ಅರ್ಹತೆ ಪಡೆದಿದ್ದರು. ಇವರಲ್ಲಿ 1:1 13,351 ಮಂದಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅರ್ಹತೆ ಪಡೆದಿದ್ದರು

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

tweet

ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿದ್ದ ಕಾರಣ ಕೆಲಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ ನಂತರ ಹೈಕೋರ್ಟ್‌ ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು. ಹಾಗೂ ಹೊಸ ಆಯ್ಕೆ ಪಟ್ಟಿ ಪ್ರಕಟಿಸಲು ಸೂಚಿಸಿತ್ತು. ಅದರಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಕ್ರಕಟಿಸಲಾಗಿತ್ತು. ಈಗ ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಫೆ. 27ರಂದು ಪ್ರಕಟವಾಗಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಯಾಗಿದ್ದು, ಈಗ ಪ್ರಕಟವಾದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ನೇಮಕಾತಿಯಲ್ಲಿ ಒಬ್ಬರ ಸಂಖ್ಯೆ ಹೆಚ್ಚಳವಾಗಿದೆ. ಮೂಲವೃಂದದಲ್ಲಿ 9,159 ಮಂದಿ, ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ 4,193 ಮಂದಿ ನೇಮಕಗೊಂಡಿದ್ದಾರೆ. ಒಟ್ಟು 21 ಎಂಜಿನಿಯರಿಂಗ್‌ ಅಭ್ಯರ್ಥಿಗಳು, ಮೂವರು ತೃತೀಯ ಲಿಂಗಿಗಳು ಆಯ್ಕೆ ಆಗಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement