ಪ್ರಧಾನಿ ಮೋದಿ ಮಂಡ್ಯ ಭೇಟಿ : ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆಗೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ವಾಹನಗಳನ್ನು ನಿರ್ಬಂಧಿಸಲಾಗಿದೆ. ಈ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮಾರ್ಗವಾಗಿ ಸಂಚರಿಸಬಹುದು.
ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚೆನ್ನಪಟ್ಟಣ-ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು – ಮೈಸೂರು ಮಾರ್ಗವಾಗಿ ಸಂಚರಿಸಬಹುದು.

ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ-ಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ-ಕೊಳ್ಳೇಗಾಲ- ಮಹದೇಶ್ವರ ಬೆಟ್ಟ ಮಾರ್ಗವಾಗಿ ಸಂಚರಿಸಲಿದೆ.
ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ವಾಹನಗಳು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಸಂಚರಿಸಲಿದೆ.
ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ವಾಹನಗಳು ತುಮಕೂರು-ಬೆಳ್ಳೂರುಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಸಂಚರಿಸಲಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement