ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಬಳಿ ಮೂವರು ಹೆಣ್ಣುಮಕ್ಕಳಿಗೆ ವಿಷ ಕುಡಿಸಿ, ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ…!

ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ಜೀವನ ನಿರ್ವಹಣೆ ಸಂಕಷ್ಟದ ಕಾರಣದಿಂದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ.
ಜಿಲ್ಲೆಯ ಬೈಲಹೊಂಗಲ ಜನತಾ ಫ್ಲ್ಯಾಟ್‌ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಹೇಳಲಾಗಿದೆ. ಈ ಮಹಿಳೆ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಮಕ್ಕಳಾದ ಸೃಷ್ಟಿ (14), ಸಾಕ್ಷಿ (8), ಸಾನ್ವಿ (3) ಅವರಿಗೂ ಫಿನಾಯಿಲ್ ಕುಡಿಸಿದ್ದಾಳೆ. ನಾಲ್ವರೂ ಅಸ್ವಸ್ಥಗೊಂಡ ನಾಲ್ವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವು ವರ್ಷಗಳ ಪತಿ ಅದೃಶ್ಯಪ್ಪ ಅವರ ಜೊತೆಗೆ ಬೆಳಗಾವಿ ನಗರಕ್ಕೆ ಬಂದು ನೆಲೆಸಿದ್ದಾರೆ. ಕಟಿಂಗ್‌ ಸೆಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕಷ್ಟು ಜನರ ಕಡೆ ಸಾಲ ಮಾಡಿದ್ದಾರೆ. ಸಾಲಗಾರರ ಕಿರುಕುಳ ಹೆಚ್ಚಾಗಿದ್ದರಿಂದ ಕಳೆದ 15 ದಿನಗಳ ಹಿಂದೆ ಪತ್ನಿ, ಮಕ್ಕಳನ್ನು ಬಿಟ್ಟುನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಇದರಿಂದ ಸರಸ್ವತಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಇದರಿಂದ ನೊಂದ ಸರಸ್ವತಿ ಜೀವನ ನಿರ್ವಹಣೆಗೆ ಸಹಾಯ ಕೋರಿ ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಭೇಟಿಗೆಂದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಜಿಲ್ಲಾಧಿಕಾರಿ ಆ ವೇಳೆ ಇಲ್ಲದ ಕಾರಣ ಕಾಯುವಂತೆ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ. ಕಚೇರಿ ಸಮೀಪ ಕಾಯುತ್ತ ಕುಳಿತ ವೇಳೆ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಹಾಗೂ ವಾಂತಿ ಮಾಡಿಕೊಂಡಿದ್ದಾರೆ.. ನೋಡಿದದವರು ಮಕ್ಕಳಿಗೆ ನೀರು ಕೊಟ್ಟು ಉಪಚರಿಸಿದ್ದಾರೆ. ಈ ವೇಳೆ ಹಿರಿಯ ಮಗಳು ಜ್ಯೂಸ್ ಎಂದು ನನ್ನ ತಾಯಿ ಏನೋ ಕುಡಿಸಿದ್ದಾಳೆಂದು ಹೇಳಿದ್ದಾಳೆ. ತಕ್ಷಣ ಅಲರ್ಟ್ ಆದ ಕಚೇರಿ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಎಲ್ಲರೂ ಪಿನೈಲ್‌ ಕುಡಿದಿದ್ದು ಗಮನಕ್ಕೆ ಬಂದಿದೆ. ಚಿಕಿತ್ಸೆ ಮುಂದುವರೆಸಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement