ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು: ಸಿಜೆಐಗೆ ಪತ್ರ ಬರೆದ ವಕೀಲರ ಸಂಘ

ಬೆಂಗಳೂರು: ಲಂಚ ಪ್ರಕರಣದ ಆರೋಪಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ (Virupakshappa Madal) ಅವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿರುವ ಪ್ರಕ್ರಿಯೆ ಬಗ್ಗೆ ಬೆಂಗಳೂರು ವಕೀಲರ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರಿಗೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ರೆಡ್ಡಿ, ಪ್ರಧಾನ ಕಾರ್ಯದರ್ಶಿ … Continued

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಾಳೆ, ಗುರುವಾರ(ಮಾರ್ಚ್‌ 9)ದಿಂದ ಆರಂಭವಾಗಲಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್​ 9- 29 ರವರೆಗೆ ದ್ವಿತೀಯ ಪರೀಕ್ಷೆಗಳು ನಡೆಯಲಿವೆ. ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ … Continued

ದೆಹಲಿ ಮದ್ಯದ ನೀತಿ ಪ್ರಕರಣ: ಇ.ಡಿ.ಯಿಂದ ನಾಳೆ ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ವಿಚಾರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರಿಗೆ ನಾಳೆ ಗುರುವಾರ (ಮಾರ್ಚ್ 9) ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ. ಈಗ ರದ್ದಾದ ದೆಹಲಿ ಮದ್ಯ ನೀತಿಯಲ್ಲಿನ ಅಕ್ರಮಗಳು … Continued

ವಿಧಾನಸಭೆ ಚುನಾವಣೆ 2023: ರಾಜ್ಯಕ್ಕೆ ನಾಳೆ ಮುಖ್ಯ ಚುನಾವಣಾ ಆಯುಕ್ತರ ತಂಡ ಭೇಟಿ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ನೇತೃತ್ವದ ತಂಡ ವಿಧಾನಸಭಾ ಚುನಾವಣೆ ಪೂರ್ವಸಿದ್ಧತೆ ವೀಕ್ಷಣೆಗಾಗಿ ನಾಳೆ, ಮಾರ್ಚ್‌ 9ರಂದು ಬೆಂಗಳೂರಿಗೆ ಆಗಮಿಸಲಿದೆ. ಚುನಾವಣಾ ಆಯುಕ್ತರಾದ ಅನೂಪಚಂದ್ರ ಪಾಂಡೆ, ಅರುಣ್ ಗೋಯಲ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ನಿಯೋಗದಲ್ಲಿ ಇರುತ್ತಾರೆ. ನಾಳೆ, 9ರಂದು ಮಾರ್ಚ್‌ ರಾಜ್ಯದ … Continued

ಯುಎಇಗೆ ಸಂಬಂಧಿಸಿದ ಪಿಎಫ್‌ಐ ಭಯೋತ್ಪಾದಕ ನಿಧಿ ಜಾಲ ಭೇದಿಸಿದ ಎನ್‌ಐಎ, ಕರ್ನಾಟಕ, ಕೇರಳದಿಂದ ಐವರ ಬಂಧನ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯುಎಇಯಲ್ಲಿ ಬೇರೂರಿರುವ ಬಿಹಾರ ಮತ್ತು ಕರ್ನಾಟಕದಿಂದ ಹವಾಲಾ ವಹಿವಾಟಿನ ಮೂಲಕ ಕಾರ್ಯನಿರ್ವಹಿಸುತ್ತಿದ್ದ ಪಿಎಫ್‌ಐ ಫಂಡಿಂಗ್ ಮಾಡ್ಯೂಲ್ ಅನ್ನು ಭೇದಿಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯ ಐವರು ಸದಸ್ಯರನ್ನು ಕೇರಳದ ಕಾಸರಗೋಡು ಮತ್ತು ಕರ್ನಾಟಕದ ದಕ್ಷಿಣ ಕನ್ನಡದಿಂದ ಬಂಧಿಸಲಾಗಿದೆ. ಮಂಗಳವಾರ ಬಂಧಿತರಾದ ಈ ಐವರು ಪಿಎಫ್‌ಐ ನಾಯಕರಿಗೆ ಮತ್ತು ಸದಸ್ಯರಿಗೆ ವಿತರಿಸಲು … Continued

ಇರಾನ್ ಬಂದರಿನ ಮೂಲಕ ಅಫ್ಘಾನಿಸ್ತಾನಕ್ಕೆ 20,000 ಮೆಟ್ರಿಕ್ ಟನ್ ಗೋಧಿ ಕಳುಹಿಸಲಿರುವ ಭಾರತ

ನವದೆಹಲಿ: ಅಫ್ಘಾನಿಸ್ತಾನದ ಮಣ್ಣನ್ನು ಯಾವುದೇ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು ಎಂದು ಭಾರತ ಮತ್ತು ಐದು ಮಧ್ಯ ಏಷ್ಯಾ ರಾಷ್ಟ್ರಗಳು ಮಂಗಳವಾರ ಪ್ರತಿಪಾದಿಸಿವೆ ಮತ್ತು ಮಹಿಳೆಯರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಆಫ್ಘನ್ನರ ಹಕ್ಕುಗಳನ್ನು ಗೌರವಿಸುವ ಕಾಬೂಲ್‌ನಲ್ಲಿ “ನಿಜವಾದ ಅಂತರ್ಗತ” ರಾಜಕೀಯ ರಚನೆಯನ್ನು ರೂಪಿಸಲು ಕರೆ ನೀಡಿವೆ. ಅಫ್ಘಾನಿಸ್ತಾನದ ಕುರಿತಾದ ಭಾರತ-ಮಧ್ಯ ಏಷ್ಯಾ ಜಂಟಿ ಕಾರ್ಯನಿರತ ಗುಂಪಿನ … Continued

ಕೆಲ ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಬಹುದು ಎಂಬ ಬಿಎಸ್‌ವೈ ಹೇಳಿಕೆಯೂ…ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ವಲಯದಲ್ಲಿ ಎದ್ದ ಬಿರುಗಾಳಿಯೂ…

ಬೆಂಗಳೂರು: ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣೆ ಘೋಷಣೆಗೆ ಕೆಲವೇ ದಿನಗಳಿರುವಾಗ ಹೇಳಿರುವುದು ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಿಗೆ ಭಯ ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯ ಸದಸ್ಯರೂ ಆಗಿರುವ ಯಡಿಯೂರಪ್ಪ ಚುನಾವಣಾ ಸಮಯದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಈಗ ಬಿಜೆಪಿಯಲ್ಲಿ … Continued