ಚುನಾವಣೆಗೆ ಮೊದಲು ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ, ಬಿಜೆಪಿಗೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಪ್ರತ್ಯಕ್ಷ..!

posted in: ರಾಜ್ಯ | 0

ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಆಗಾತವಾಗಿದೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.ಅಧಿಕೃತವಾಗಿ ಎಂಎಲ್‌ಸಿ ಪುಟ್ಟಣ್ಣ ರಾಜೀನಾಮೆ ಅಂಗೀಕಾರವಾಗಿಲ್ಲ.ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಅಧಿಕೃತವಾಗಿ ಎಂಎಲ್‌ಸಿ ಪುಟ್ಟಣ್ಣ ರಾಜೀನಾಮೆ ಅಂಗೀಕಾರವಾಗಿಲ್ಲ  ಹೀಗಾಗಿ ಕೆಪಿಸಿಸಿ ಕಚೇರಿಯಲ್ಲಿಪಕ್ಷದ ಬಾವುಟ ನೀಡದೆ ಪುಟ್ಟಣ್ಣರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ವಾಗತಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಪುಟ್ಟಣ್ಣ ಅವರು 2019ರಲ್ಲಿ ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ್ದು, ಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
2019 ರಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದರು. ನಾಲ್ಕು ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಪುಟ್ಟಣ್ಣ, ಬಿಜೆಪಿಗೆ ಗುಡ್‌ ಬೈ ಹೇಳಿದ್ದು, ಕಾಂಗ್ರೆಸ್‌ ಪಕ್ಷವನ್ನು ಸೇರಲು ಮುಂದಾಗಿದ್ದಾರೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪುಟ್ಟಣ್ಣ ಪಕ್ಷ ತೊರೆದಿರುವುದು, ಬಿಜೆಪಿಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀತಿ ಮೀರಿದ ಭ್ರಷ್ಟಾಚಾರದ ಕಾರಣಕ್ಕೆ ಬಿಜೆಪಿ ತೊರೆಯುತ್ತಿರುವುದಾಗಿ ತಿಳಿಸಿದರು. ತಾಂತ್ರಿಕ ಕಾರಣದಿಂದಾಗಿ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿಲ್ಲ ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾಲ್ಕು ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಆಗಿದ್ದೇನೆ. ಬಿಜೆಪಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರದಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಫ್ರೀಡಂ ಪಾರ್ಕ್‌ನಲ್ಲಿ ನಡೆದ ಶಿಕ್ಷಕರ ಪ್ರತಿಭಟನೆ ವೇಳೆ ಇಬ್ಬರು ಶಿಕ್ಷಕರು ಆತ್ಮಹತ್ಯೆಗೆ ಶರಣಾದರೂ, ಬಿಜೆಪಿ ಸರ್ಕಾರ ಸ್ಪಂದಿಸಲಿಲ್ಲ. ಬಿಜೆಪಿ ಪಕ್ಷ ಸೇರಿ ತಪ್ಪು ಮಾಡಿದೆ ಎಂದು ಆತ್ಮಸಾಕ್ಷಿ ಹೇಳುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರುತ್ತಿದ್ದೇನೆ. ನನ್ನ ಪಕ್ಷ ಸೇರ್ಪಡೆ ಕುರಿತು ರಾಜ್ಯ ಕಾಂಗ್ರೆಸ್‌ ನಾಯಕರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಈ ವೇಳೆ ಹೇಳಿದರು.

ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ ಹಾಗೂ ಸಿದ್ದರಾಮಯ್ಯ, ಬಿಜೆಪಿ ಆಡಳಿತದಲ್ಲಿ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯ, ಭ್ರಷ್ಟಾಚಾರ, ಕೋಮುವಾದದಿಂದ ಬೇಸತ್ತು ಪುಟ್ಟಣ್ಣ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರು ಕಾಂಗ್ರೆಸ್‌ ಸೇರುತ್ತಿರುವುದು ಪಕ್ಷಕ್ಕೆ ಶಕ್ತಿ ಬಂದಂತಾಗಿದೆ ಎಂದರು.
ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ, ಪುಟ್ಟಣ್ಣ ಅವರು ಯಾವುದೇ ಪೂರ್ವ ಷರತ್ತು ವಿಧಿಸದೇ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದರು.

ಇಂದಿನ ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ..?

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement