ಬೈಲಹೊಂಗಲ : ಹೊಲದಲ್ಲಿ ದೊಡ್ಡ ಬಲೂನ್ ಪತ್ತೆ, ಅದರೊಳಗಿತ್ತು ಎಲೆಕ್ಟ್ರಾನಿಕ್ ವಸ್ತು, ಬ್ಯಾಟರಿ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ‌ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಬೃಹತ್‌ ಬಲೂನ್ ಪತ್ತೆಯಾಗಿದ್ದು, ಅದರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಕಂಡುಬಂದಿದ್ದರಿಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗದ್ದಿಕರವಿನಕೊಪ್ಪ ಗ್ರಾಮದ ಹೊಲದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಈ ಬಲೂನ್ ಬಂದು ಬಿದ್ದಿತ್ತು.‌ ಕೂಡಲೇ ಗ್ರಾಮಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಬಂದು ಪರಿಶೀಲನೆ ನಡೆಸಿದರು. ಈ ದೊಡ್ಡದಾದ ಬಲೂನ್ ನಲ್ಲಿ ಕೆಲ ಎಲೆಕ್ಟ್ರಾನಿಕ್ ವಸ್ತುಗಳು, ಬ್ಯಾಟರಿ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ “ಈ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸಿದ್ದೇವೆ. ಇದು ಎತ್ತರದ ಪ್ರದೇಶಗಳಲ್ಲಿ ಹವಾಮಾನವನ್ನು ನಿರ್ಧರಿಸಲು ಬಳಸುವ ಸಾಧನವಾಗಿದೆ. ಈ ಬಗ್ಗೆ ಯಾವುದೇ ಚಿಂತೆ ಬೇಡ. ನಾವು ಬಲೂನಿನ ಮೂಲವನ್ನು ಪತ್ತೆ ಮಾಡಿದ್ದೇವೆ. ನಂತರ, ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದು ಎತ್ತರದ ತಾಪಮಾನ, ಗಾಳಿಯ ವೇಗದ ಗಾಳಿಯ ಒತ್ತಡ ಇತ್ಯಾದಿಗಳನ್ನು ತಿಳಿದುಕೊಳ್ಳಲು ಹಾರಿಸುತ್ತಾರೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement