ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾರ್ಚ್ 31ರ ವರೆಗೆ ವಿಸ್ತರಣೆ

ಬೆಂಗಳೂರು: ಸಹಕಾರಿ ಸಂಘದ ಸದಸ್ಯರು, ರೈತರಿಗೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು ಹೊಸ ಸದಸ್ಯರ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಜನ ಯೋಜನೆಗೆ ನೋಂದಾಯಿಸಿಕೊಳ್ಳತೊಡಗಿದ್ದಾರೆ. ಹೀಗಾಗಿ ಅವಧಿ ವಿಸ್ತರಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದನ್ನು ಪರಿಗಣಿಸಿ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಸಹಕಾರಿ ಸಂಘದ ಸದಸ್ಯರು, ರೈತರಿಗೆ ಸರ್ಕಾರವು ಯಶಸ್ವಿನಿ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸಲು ನಿರ್ಧರಿಸಿದ್ದು, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ಮೀಸಲಿರಿಸಿದೆ.

ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ 500 ರೂ.ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ 100 ರೂ.ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬವೊಂದಕ್ಕೆ 1,000 ರೂ. ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ 200 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.
ಡಿಸೆಂಬರ್ 31 ವರೆಗೆ ಇದ್ದ ಅವಧಿಯನ್ನು ಈ ಹಿಂದೆ ಎರಡು ಬಾರಿ ವಿಸ್ತರಿಸಲಾಗಿತ್ತು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement